ಶಿವಮೊಗ್ಗ: ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದು, ನಗರದಲ್ಲಿ ಆರೋಗ್ಯದಲ್ಲಿ ಏರುಪೇರಾದ ಕಾರಣ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದು ಬಂದಿದೆ.
ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆಗೆ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ ಅವರು ಅನಾರೋಗ್ಯದ ಕಾರಣ, ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಈ ವಿಷಯ ತಿಳಿದಂತ ಶಾಲಾ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿ, ಕಾಗೋಡು ತಿಮ್ಮಪ್ಪ ಅವರ ಆರೋಗ್ಯವನ್ನು ವಿಚಾರಿಸಿದರು.
ಇನ್ನೂ ಮಾಜಿ ಸಚಿವ ಹರತಾಳು ಹಾಲಪ್ಪ ಹಾಗೂ ಸಾಗರ ತಾಲ್ಲೂಕು ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಸೂಚನೆ ಮೇರೆಗೆ ಕರ್ತವ್ಯಾಧಿಕಾರಿ ಟಿ.ಪಿ ರಮೇಶ್ ಅವರು ಕೂಡ ಕಾಗೋಡು ತಿಮ್ಮಪ್ಪ ಅವರು ಚಿಕಿತ್ಸೆ ಪಡೆಯುತ್ತಿದ್ದಂತ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಅಲ್ಲದೇ ಅವರಿಗೆ ಧೈರ್ಯ ತುಂಬಿದರು.
ಪ್ರಯಾಣಿಕರ ಗಮನಕ್ಕೆ: ಜು.29ರ ನಾಳೆಯಿಂದ ಜು.4ರವರೆಗೆ ಈ ರೈಲುಗಳ ಸಂಚಾರ ರದ್ದು | Train Cancelled
ಪ್ರಯಾಣಿಕರ ಗಮನಕ್ಕೆ: ಜು.29ರ ನಾಳೆಯಿಂದ ಜು.4ರವರೆಗೆ ಈ ರೈಲುಗಳ ಸಂಚಾರ ರದ್ದು | Train Cancelled