ಕಲಬುರ್ಗಿ: ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಸಾವನ್ನಪ್ಪಿದ್ದಾರೆ.
ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ದುರ್ಮರಣ ಹೊಂದಿದ್ದಾರೆ. ಜೇವರ್ಗಿ ಬಳಿಯಲ್ಲಿ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಂತ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಕಾರು ಅಪಘಾತದಲ್ಲಿ ಜೇವರ್ಗಿ ಬಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಂತ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರನ್ನು ಕಲಬುರ್ಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಅಂದಹಾಗೇ ಮೃತ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಪ್ರಸ್ತುತ ಬೆಸ್ಕಾಂ ಎಂಡಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿಯೂ ಕಾರ್ಯ ನಿರ್ವಹಿಸಿದ್ದರು. ಉತ್ತಮ ಅಧಿಕಾರಿಯೆಂದೇ ಗುರ್ತಿಸಿಕೊಂಡಿದ್ದಂತ ಮಹಾಂತೇಶ್ ಬೀಳಗಿ ಇಂದು ಅಪಘಾತದಲ್ಲಿ ನಿಧನರಾಗುವ ಮೂಲಕ ಇನ್ನಿಲ್ಲವಾಗಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ.., ಸಂಪಾದಕರು
ಮಂಡ್ಯ ಕೃಷಿ ವಿವಿಗೆ ಮೂಲಸೌಕರ್ಯ ಕಲ್ಪಿಸಲು 100 ಕೋಟಿ ಅನುದಾನ: ಸಚಿವ ಎನ್.ಚಲುವರಾಯಸ್ವಾಮಿ








