ಬೆಂಗಳೂರು: ನೈಸ್ ಕೇಸ್ ಸೇರಿದಂತೆ ವಿವಿಧ ಪ್ರಮುಖ ಪ್ರಕರಣಗಳಲ್ಲಿ ವಾದಿಸಿದ್ದಂತ ಕರ್ನಾಟಕ ಹೈಕೋರ್ಟ್ ನ ಹಿರಿಯ ವಕೀಲ ಕೆ.ಸುಮನ್ (64) ಅವರು ಇಂದು ವಿಧಿವಶರಾಗಿದ್ದಾರೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಕರ್ನಾಟಕ ಹೈಕೋರ್ಟ್ ಹಿರಿಯ ವಕೀಲ ಕೆ.ಸುಮನ್ ಅವರು ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.
ಕೆ.ಸುಮನ್ ಅವರು ಕರ್ನಾಟಕ ಹೈಕೋರ್ಟ್ ನ ಹಿರಿಯ ವಕೀಲರಾಗಿದ್ದರು. ಮಂತ್ರಾಲಯ ಮಠದ ಪರವಾಗಿ ವೃಂದಾವನ ಆಧಾರನೆ ಪ್ರಕರಣ, ನೈಸ್ ಕೇಸ್ ಸೇರಿದಂತೆ ಹಲವು ಪ್ರಮುಖ ಪ್ರಕರಣಗಳಲ್ಲಿ ವಾದಿಸಿದ್ದರು. ಇಂತಹ ಹಿರಿಯ ವಕೀಲ ಕೆ.ಸುಮನ್ ಅವರು ಇನ್ನಿಲ್ಲವಾಗಿದ್ದಾರೆ.
ಮೃತ ಕೆ.ಸುಮನ್ ಅವರ ಅಂತ್ಯಕ್ರಿಯೆಯನ್ನು ನಾಳೆ ಮಧ್ಯಾಹ್ನ 2 ಗಂಟೆಗೆ ಹೆಬ್ಬಾಳದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂಬುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.
ಮದ್ದೂರಿನ ಮಾದರಿ ಕ್ಷೇತ್ರಕ್ಕೆ ಕದಲೂರಿನಿಂದಲೇ ಮುನ್ನುಡಿ: ಶಾಸಕ ಕೆ.ಎಂ.ಉದಯ್