ತುಮಕೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡ ಮಹತ್ವದ ಹೇಳಿಕೆ ನೀಡಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಬದಲಾವಣೆ ಮಾಡುವ ಕುರಿತಂತೆ ವರಿಷ್ಠರು ಚಿಂತನೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ವರಿಷ್ಠರು ಚಿಂತನೆ ನಡೆಸಿದ್ದು, ಸ್ವಾತಂತ್ರ್ಯ ದಿನೋತ್ಸವಕ್ಕೂ ಮೊದಲೇ ಮುಖ್ಯಮಂತ್ರಿ ಬದಲಾವಣೆ ಆಗುವ ಸಾಧ್ಯತೆಗಳಿವೆ. ಈ ಬಗ್ಗೆ ಪಕ್ಷದಲ್ಲಿ ಚರ್ಚೆಗಳು ನಡೆದಿವೆ ಎಂದು ಹೇಳಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಅವರು ತಮ್ಮ ಒಂದು ವರ್ಷದ ಅವಧಿಯಲ್ಲಿ ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಆದರೂ ವರಿಷ್ಠರು ಬದಲಾವಣೆ ಮಾಡುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
Big news: ಮಹಾರಾಷ್ಟ್ರ ಸಂಪುಟ ವಿಸ್ತರಣೆ: ಇಂದು ಬೆಳಗ್ಗೆ 11 ಗಂಟೆಗೆ ನೂತನ ಸಚಿವರ ಪ್ರಮಾಣವಚನ ಸ್ವೀಕಾರ