ರಾಮನಗರ : ಶಿವಮೊಗ್ಗದ ಗಲಾಟೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಶಿವಮೊಗ್ಗದ ಗಲಾಟೆಗೆ ರಾಜ್ಯ ರಾಜಕಾರಣವೇ ಕಾರಣ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾತಂತ್ರ್ಯ ತಂದು ಕೊಟ್ಟವರ ಬಗ್ಗೆ ಬಿಜೆಪಿ ಸ್ಮರಿಸುತ್ತಿಲ್ಲ. ದೇಶದಲ್ಲಿ ಅಶಾಂತಿ ವಾತಾವರಣ ನಿರ್ಮಾಣ ಮಾಡುತ್ತಿದೆ. ಇದರಿಂದ ದೇಶಾದ್ಯಂತ ಸಂಘರ್ಷಗಳು ಹೆಚ್ಚಳವಾಗುತ್ತಿವೆ. ಬಿಜೆಪಿಯಿಂದಾಗಿ ಸಹೋದರ ಬಾಂಧವ್ಯ ಕಲುಷಿತ ಮಾಡುವ ಕೆಲಸ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
BIGG BREAKING NEWS: ಮಂತ್ರಾಲಯದಿಂದ ವಾಪಸ್ ಬರುತ್ತಿದ್ದ ವೇಳೆ ಭೀಕರ ರಸ್ತೆ ಅಪಘಾತ; ವೃದ್ಧ ದಂಪತಿ ಸ್ಥಿತಿ ಗಂಭೀರ
ವಿ ಡಿ ಸಾವರ್ಕರ್ ಫ್ಲೆಕ್ಸ್ ವಿವಾದದಿಂದಾಗಿ ಬಿಗುವಿನ ವಾತಾವಣವಿದೆ. ಅಲ್ಲದೇ ಎರಡು ಕಡೆಗಳಲ್ಲಿ ಇಬ್ಬರಿಗೆ ಚಾಕುವಿನಿಂದ ಇರಿದ ಪರಿಣಾಮ ಮತ್ತಷ್ಟು ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತೆ ಆಗಿದೆ. ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರ ಹಾಗೂ ಭದ್ರಾವತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಹೀಗಾಗಿ ಇಂದು ಶಿವಮೊಗ್ಗ ಮತ್ತು ಭದ್ರಾವತಿ ನಗರದ ಶಾಲಾ-ಕಾಲೇಜುಗಳಿಗೆ ರಜೆ ( School and College Holiday ) ಘೋಷಣೆ ಮಾಡಲಾಗಿದೆ.