ಬೆಂಗಳೂರು : ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರು ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
BIGG NEWS : ರಾಜ್ಯದಲ್ಲಿ ಮತ್ತೊಂದು ನೇಮಕಾತಿ ಹಗರಣ ಬಯಲಿಗೆ : ಸುಳ್ಳು ದಾಖಲೆ ನೀಡಿ ನೇಮಕಗೊಂಡಿದ್ದ 11 ಶಿಕ್ಷಕರ ಬಂಧನ
ಉಮೇಶ್ ಕತ್ತಿ ನಿಧನಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದು, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಸಚಿವರಾದ ಉಮೇಶ್ ಕತ್ತಿ ಅವರ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಕುಟುಂಬವರ್ಗಕ್ಕೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
BIGG NEWS : ಬೆಂಗಳೂರು ಸೇರಿ ರಾಜ್ಯಾದ್ಯಂತ ವರುಣಾರ್ಭಟ : ಒಂದೇ ದಿನ ಮಹಾಮಳೆಗೆ 9 ಬಲಿ
ಬೆಂಗಳೂರಿನಲ್ಲಿ ರಾತ್ರಿ ಭೋಜನ ಸ್ವೀಕರಿಸಿದ ಬಳಿಕ ಶೌಚಾಲಯಕ್ಕೆ ತೆರಳಿದ ವೇಳೆ ಹೃದಯಾಘಾತ ಸಂಭವಿಸಿದೆ. ಅಲ್ಲೇ ಕುಸಿದು ಬಿದ್ದಿದ್ದ ಅವರನ್ನು ಸಮೀಪದ ಎಸ್.ಎಂ. ರಾಮಯ್ಯ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಿದರೂ ಚಿಕಿತ್ಸೆ ಫಲಿಕಾರಿಯಾಗದೇ ಸಾವನ್ನಪ್ಪಿದ್ದಾರೆ. ಅವರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಉಮೇಶ್ ಕತ್ತಿ ಅಂತ್ಯಕ್ರಿಯೆಯನ್ನು ಹುಟ್ಟೂರಾದ ಬೆಲ್ಲದ ಬಾಗೇವಾಡಿಯಲ್ಲಿ ಇಂದು ನೆರವೇರಿಸಲಾಗುವುದು. ಅದಕ್ಕೂ ಮೊದಲು ಬೆಂಗಳೂರು ನಿವಾಸದ ಬಳಿ ಸಾರ್ವಜನಿಕರಿಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಬಳಿಕ ವಿಶೇಷ ವಿಮಾನದಲ್ಲಿ ಹುಟ್ಟೂರಿಗೆ ಕೊಂಡೊಯ್ಯಲಾಗುತ್ತದೆ, ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.