ಕಲಬುರಗಿ : ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಕುರಿತಂತೆ ಮಾಜಿ ಸಚಿವ ಎಂ.ಬಿ.ಪಾಟೀಲ್ ಮಹತ್ವದ ಹೇಳಿಕೆ ನೀಡಿದ್ದು, ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವರು ಮುಖ್ಯಮಂತ್ರಿ ಅಭ್ಯರ್ಥಿಗಳಿದ್ದಾರೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ ಅನೇಕರಿದ್ದಾರೆ. ಅಧಿಕಾರಕ್ಕೆ ಬಂದ ಮೇಲೆ ಸಿಎಂ ಯಾರೆಂದು ನಿರ್ಧಾರ ಮಾಡುತ್ತೇವೆ. ಶಾಸಕಾಂಗ ಸಭೆ ಬಳಿಕ ಅಭಿಪ್ರಾಯ ಸಂಗ್ರಹಿಸಿ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಮಾಡಲಾಗುತ್ತದೆ.
ಚುನಾವಣೆ ಹತ್ತಿರ ಬಂದಂತೆ ರಾಜ್ಯದಲ್ಲಿ ದೊಡ್ಡ ಸಂಚಲನ ಉಂಟಾಗಲಿದೆ. ಏಳೆಂಟು ಬಿಜೆಪಿ ಶಾಸಕರು ಕಾಂಗ್ರೆಸ್‌ಗೆ ಬರಲಿದ್ದಾರೆ. ಅಲ್ಲದೇ ಕಾಂಗ್ರೆಸ್‌ನಲ್ಲಿ ಗೆಲ್ಲುವ ಶಾಸಕರ ಆಯ್ಕೆಯೂ ನಡೆಯುತ್ತಿದೆ ಎಂದು ಹೇಳಿದರು.