ಬೆಂಗಳೂರು: ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ತುಳಿತಕ್ಕೆ ಒಳಗಾದ ಪರಿಶಿಷ್ಟ ಸಮುದಾಯದವರಿಗಾಗಿ ಇರುವ ಎಸ್‍ಇಪಿ- ಟಿಎಸ್‍ಪಿ ವಿಶೇಷ ಯೋಜನೆ. ವಿದ್ಯಾವಂತರನ್ನಾಗಿ ಮಾಡುವುದು, ಜಮೀನು ಖರೀದಿಸಿ ಕೊಡುವುದು, ಭೂಮಿಗೆ ಕೊಳವೆಬಾವಿ ಹಾಕಿಸಿ ನೀರು ಕೊಡುವುದು, ಕೈಗಾರಿಕೆ ಸ್ಥಾಪನೆಗೆ ನೆರವಿನಂಥ ಆಸ್ತಿ ನಿರ್ಮಾಣಕ್ಕೆ ಹಣ ಕೊಡುವ ಯೋಜನೆ ಇದು. ಅದರ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸಿ ಮೋಸ ಮಾಡಿದ್ದಾರೆ ಎಂದು ಟೀಕಿಸಿದರು.
ಪರಿಶಿಷ್ಟ ಸಮುದಾಯದವರು ಫ್ರೀ ಬಸ್ಸಿನಲ್ಲಿ ಓಡಾಡುವುದಿಲ್ಲ; ಮೋಜು ಮಸ್ತಿ ಮಾಡುವುದಿಲ್ಲ. ಆದರೆ, ನೀವು ನಮ್ಮವರ ವಿಶೇóಷ ಯೋಜನೆಯ ಹಣವನ್ನು ತೆಗೆದು ನಿಮ್ಮ ಖಾತೆಗೆ ಹಾಕಿದ್ದೀರಿ ಎಂದು ಆಕ್ಷೇಪಿಸಿದರು. ಇದು ನಮ್ಮ ಜನಾಂಗಕ್ಕೆ ಮಾಡಿದ ಮೋಸ ಅಲ್ಲವೇ? ಎಂದು ಪ್ರಶ್ನಿಸಿದರು.
ನಮ್ಮಲ್ಲಿ ವಿದ್ಯಾವಂತರು ಹೆಚ್ಚಾಗಿದ್ದಾರೆ. ಆದರೆ, ನಿರುದ್ಯೋಗವೂ ಅಷ್ಟೇ ಬೆಳೆಯುತ್ತಿದೆ. ಯುವನಿಧಿ ಪೇಪರಲ್ಲಿ ಇದೆಯೇ ಹೊರತು ನಮ್ಮ ಜನರಿಗೆ ಇದು ದಕ್ಕಿಲ್ಲ ಎಂದು ವಿವರಿಸಿದರು.
ರಿಪಬ್ಲಿಕ್ ಪಾರ್ಟಿಯ ರಾಜ್ಯದ ಹಿರಿಯ ಮುಖಂಡ ಡಾ.ಎಂ.ವೆಂಕಟಸ್ವಾಮಿ, ಮಾಜಿ ಸಚಿವ ಮತ್ತು ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಮಾಜಿ ಶಾಸಕ ಸಂಪಂಗಿ, ಸಮಾಜದ ಮುಖಂಡ ಹರಿರಾಮ್, ದಲಿತ ಮುಖಂಡ ಜಗನ್ನಾಥ್, ಮುಖಂಡರಾದ ಚಿ.ನಾ.ರಾಮು, ಮುನಿಕೃಷ್ಣ, ಸತೀಶ್, ಪಿ.ಮೂರ್ತಿ, ಡಾ.ಮುನಿರಾಜು, ರಮೇಶ್, ಮಹೇಶ್ ಮತ್ತು ವಿವಿಧ ದಲಿತ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.
ಸಿಎಂ ದಲಿತಪರ ಕಾಳಜಿ ಎಲ್ಲಿ ಹೋಗಿದೆ? ಅಧಿಕಾರಕ್ಕೆ ಬಂದ ಬಳಿಕ ಮರೆತೋಯಿತೆ?: ಬಿವೈ ವಿಜಯೇಂದ್ರ ಪ್ರಶ್ನೆ
ಹಕ್ಕಿಜ್ವರ ಬಾರದಂತೆ ಮುನ್ನಚ್ಚರಿಕೆ ಕ್ರಮ ವಹಿಸಿ: ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ