ಬೆಂಗಳೂರು: ಸರ್ಕಾರದಿಂದ ಪ್ರತ್ಯೇಕವಾಗಿ ಮುಸ್ಲಿಂ ಕಾಲೇಜು ಪ್ರಾರಂಭ ಮಾಡುವ ಪ್ರಸ್ತಾವನೆ ಇಲ್ಲ ಎಂದು ಅಲ್ಪಸಂಖ್ಯಾತ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಿಎಂ ಬೊಮ್ಮಾಯಿ ಅವರೇ ಇತ್ತೀಚೆಗೆ ಸ್ಪಷ್ಟಪಡಿಸಿದ್ದರು. ಆದರೆ ಇದೀಗ ಹಿಂದೂ ಮುಖಂಡರೊಬ್ಬರು, ಮುಸ್ಲಿಂ ಕಾಲೇಜು ಪ್ರಸ್ತಾವನೆಗೆ ಸರ್ಕಾರ ಒಪ್ಪಿಗೆ ನೀಡಿರುವ ಆದೇಶದ ಪ್ರತಿಯನ್ನು ಬಿಡುಗಡೆ ಮಾಡಿ ಸಿಎಂ ಬೊಮ್ಮಾಯಿಗೆ ಪ್ರಶ್ನಿಸಿದ್ದಾರೆ.
ಈ ಬಗ್ಗೆ ಹಿಂದೂ ಮುಖಂಡ ಮೋಹನ ಗೌಡ ಎನ್ನುವವರು ಟ್ವೀಟ್ ಮಾಡಿದ್ದು, ಕಳೆದ ಜುಲೈ ತಿಂಗಳಿನಲ್ಲಿ 10 ಪ್ರತ್ಯೇಕ ಮುಸಲ್ಮಾನ್ ಕಾಲೇಜು ಸ್ಥಾಪನೆ ಮಾಡಲು ಆದೇಶ ನೀಡಿ, ಅದಕ್ಕೆ ಹಣ ಸಹ ಮಂಜುರಾತಿ ಮಾಡಲು ಆದೇಶ ನೀಡಿ, ಈಗ ಸರಕಾರದ ಮುಂದೆ ಯಾವುದೇ ಮುಸಲ್ಮಾನ ಕಾಲೇಜು ಸ್ಥಾಪನೆಯ ಪ್ರಸ್ತಾಪ ಇಲ್ಲ ಎಂದು ಹೇಳುವುದು ಎಷ್ಟು ಹಾಸ್ಯಾಸ್ಪದಾ? ಎಂದು ಟ್ವೀಟ್ ಮಾಡಿದ್ದಾರೆ.
ಮೋಹನ ಗೌಡ ಅವರು ಮುಸ್ಲಿಂ ಕಾಲೇಜು ನಿರ್ಮಾಣ ಮಾಡುವ ವಿಚಾರವಾಗಿ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯ ಸರ್ಕಾರದ ಉಪಕಾರ್ಯದರ್ಶಿ ಆದೇಶದ ಪ್ರತಿ ಟ್ವೀಟ್ ಮಾಡಿದ್ದಾರೆ.
ಶಶಿಕಲಾ ಜೊಲ್ಲೆ ಹೇಳಿದ್ದೇನು..?
ಪ್ರತ್ಯೇಕವಾಗಿ ಮುಸ್ಲಿಂ ಹುಡುಗಿಯರಿಗೆ 10 ಮುಸ್ಲಿಂ ಕಾಲೇಜು ಸ್ಥಾಪನೆ ಮಾಡಲಾಗುತ್ತದೆ ಎಂಬ ವಿಚಾರಕ್ಕೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ್ದರು.. ಅಲ್ಲದೆ ಕಾಲೇಜು ಸ್ಥಾಪನೆ ಮಾಡುತ್ತೇವೆ ಎಂದು ಹೇಳಿಕೆ ನೀಡಿದ್ದ ವಕ್ಫ್ ಬೋರ್ಡ್ ಅಧ್ಯಕ್ಷರಿಗೆ ಎಚ್ಚರಿಕೆ ಕೊಟ್ಟಿದ್ದಾರೆ.ಸರ್ಕಾರದಿಂದ ಪ್ರತ್ಯೇಕ ಮುಸ್ಲಿಂ ಕಾಲೇಜು ಸ್ಥಾಪನೆ ಮಾಡುವುದಿಲ್ಲ. ಪ್ರತ್ಯೇಕ ಕಾಲೇಜು ಪ್ರಾರಂಭ ಮಾಡುವ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ. ಸರ್ಕಾರದ ಮುಂದೆ ಕಡತವೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈಗಾಗಲೇ ಕಾಲೇಜು ಪ್ರಾರಂಭಕ್ಕೆ ಅನುಮತಿ ನೀಡಲಾಗಿದೆ ಎಂಬುದು ಸತ್ಯಕ್ಕೆ ದೂರವಾದ ವಿಷಯ. ವಕ್ಫ್ ಬೋರ್ಡ್ ಅಧ್ಯಕ್ಷ ಹೇಳಿಕೆ ಅವರ ವೈಯಕ್ತಿಕ ಹೇಳಿಕೆ. ವಕ್ಫ್ ಬೋರ್ಡ್ ಅಧ್ಯಕ್ಷರ ಜೊತೆ ಮಾತನಾಡಿದ್ದೇನೆ. ವಿವಾದಕ್ಕೆ ಸ್ಪಷ್ಟನೆ ನೀಡಲು ಸೂಚನೆ ನೀಡಿದ್ದೇನೆ ಎಂದು ಶಶಿಕಲಾ ಜೊಲ್ಲೆ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದರು.
ಕಳೆದ ಜುಲೈ ತಿಂಗಳಿನಲ್ಲಿ 10 ಪ್ರತ್ಯೇಕ ಮುಸಲ್ಮಾನ್ ಕಾಲೇಜು ಸ್ಥಾಪನೆ ಮಾಡಲು ಆದೇಶ ನೀಡಿ, ಅದಕ್ಕೆ ಹಣ ಸಹ ಮಂಜುರಾತಿ ಮಾಡಲು ಆದೇಶ ನೀಡಿ, ಈಗ ಸರಕಾರದ ಮುಂದೆ ಯಾವುದೇ ಮುಸಲ್ಮಾನ ಕಾಲೇಜು ಸ್ಥಾಪನೆಯ ಪ್ರಸ್ತಾಪ ಇಲ್ಲ ಎಂದು ಹೇಳುವುದು ಎಷ್ಟು ಹಾಸ್ಯಾಸ್ಪದಾ?@ShashikalaJolle @BSBommai @BCNagesh_bjp @RAshokaBJP
Just Asking pic.twitter.com/Pcw2FtHtOT
— 🚩Mohan gowda🇮🇳 (@Mohan_HJS) December 2, 2022
BREAKING NEWS : ‘ವಿನಯ್ ಕುಲಕರ್ಣಿಗೆ’ 3 ಗಂಟೆ ಹುಬ್ಬಳ್ಳಿ ಭೇಟಿಗೆ ಅನುಮತಿ ನೀಡಿದ ಕೋರ್ಟ್
ನಾಳೆ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ ಉಸ್ತುವಾರಿ ಸಮಿತಿ ಮೊದಲ ಸಭೆ