ಚಿತ್ರದುರ್ಗ: ಜಿಲ್ಲೆಯಲ್ಲಿ ಇಂದು ಹಿರಿಯೂರು ಬಳಿಯಲ್ಲಿ ಲಾರಿ, ಬಾಸ್, ಟಾಟಾ ಏಸ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವಗೊಂಡನಹಳ್ಳಿ ಬಸ್ ನಿಲ್ದಾಣದ ಬಳಿಯಲ್ಲಿ ಟಾಟಾ ಏಸ್, ಬಸ್ ಹಾಗೂ ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಇನ್ನೂ ಹಿರಿಯೂರು ತಾಲೂಕಿನ ಜವಗೊಂಡನಹಳ್ಳಿ ಬಳಿಯಲ್ಲಿ ನಡೆದಂತ ಸರಣಿ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ. ಅವರನ್ನು ಹಿರಿಯೂರು ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಈ ಸಂಬಂಧ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.