ರಾಮನಗರ: ಜಿಲ್ಲೆಯ ಬಿಡದಿ ಬಳಿ ಇಂದು ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಕೃಷ್ಣರಾಜಪೇಟೆ (ಕೆ.ಆರ್. ಪೇಟೆ) ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಕೆ.ಬಿ. ಚಂದ್ರಶೇಖರ್ ಅವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಾಜಿ ಶಾಸಕ ಕೆ.ಬಿ. ಚಂದ್ರಶೇಖರ್ ಅವರು ತಮ್ಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಬಿಡದಿ ಬಳಿ ಸರಣಿ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಜಖಂಗೊಂಡಿದೆಯಾದರೂ, ಕಾರಿನಲ್ಲಿದ್ದ ಮಾಜಿ ಶಾಸಕರು ಹಾಗೂ ಅವರ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆ ನಡೆದ ಮುನ್ನ ಕಾರಿನಲ್ಲಿ ಮಾಜಿ ಶಾಸಕರು ಹಾಗೂ ಡ್ರೈವರ್ ಇಬ್ಬರೇ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಸದ್ಯ ಗಾಯಾಳುಗಳು ಸುರಕ್ಷಿತವಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
BREAKING: ಆಹಾರ ಪದಾರ್ಥಗಳನ್ನು ಪ್ಯಾಕ್ ಮಾಡಲು, ಬಡಿಸಲು ನ್ಯೂಸ್ ಪೇಪರ್ ಬಳಸುವಂತಿಲ್ಲ: FSSAI ನಿಷೇಧ








