ಬೆಂಗಳೂರು : ನಗರದಲ್ಲಿ ಮಾದಕ ದಂಧೆ ನಡೆಸುತ್ತಿದ್ದ ಕಿರುತೆರೆ ಸಹನಟ ಸೇರಿದಂತೆ ಮೂವರನ್ನು ಸಿಲಿಕಾನ್ ಸಿಟಿ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಶಿಯಾಜ್, ಮಹಮ್ಮದ್ ಶಾಹೀದ್, ಮಂಗಲ್ ತೋಡಿ, ಜಿತೀನ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಕೇರಳ ಮೂಲದವರಾಗಿದ್ದು, ಬೆಂಗಳೂರಿನಲ್ಲಿ ಮಾದಕ ದಂಧೆಯಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ.
ಬಂಧಿತ ಆರೋಪಿಗಳಿಂದ ಪೊಲೀಸರು ಬರೋಬ್ಬರಿ 13 ಲಕ್ಷ ಮೌಲ್ಯದ 191 ಗ್ರಾಂ ಎಂಡಿಎಂಎ ಹಾಗೂ 2.80 ಕೆಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ. ಬಂಧಿರ ಪೈಕಿ ಶಿಯಾಜ್ ಮಲಯಾಳಂ ಕಿರುತೆರೆಯಲ್ಲಿ ಸಹ ನಟನಾಗಿ ಕೆಲಸ ಮಾಡಿಕೊಂಡಿದ್ದನು. ಹಾಗೂ ಶಾಹೀದ್ ಒಂದು ಮೊಬೈಲ್ ಶಾಪ್ ನಲ್ಲಿ ಕೆಲಸಕ್ಕೆ ಇದ್ದನು ಎಂಬುದಾಗಿ ತಿಳಿದು ಬಂದಿದೆ. ಸದ್ಯ ಈ ಸಂಬಂಧ ಹೆಚ್ ಎಸ್ ಆರ್ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಸಾಂದರ್ಭಿಕ ಚಿತ್ರ
BIGG NEWS: ಹುಬ್ಬಳ್ಳಿಯಲ್ಲಿ ಪೊಲೀಸರ ಮುಂದೆಯೇ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನ : ಯುವಕನ ಸ್ಥಿತಿ ಗಂಭೀರ
SHOCKING NEWS: ಬಂದೂಕು ಹಿಡಿದು ಆಟವಾಡುತ್ತಿದ್ದ 3 ವರ್ಷದ ಬಾಲಕ… ಆಕಸ್ಮಿಕವಾಗಿ ಹಾರಿದ ಗುಂಡಿಗೆ ತಾಯಿ ಬಲಿ