ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯ ಸೆಪ್ಟೆಂಬರ್.22ರಿಂದ ಆರಂಭಗೊಂಡಿದೆ. ಅಕ್ಟೋಬರ್.4ರವರೆಗೆ ನಡೆಸಲು ನಿರ್ಧರಿಸಿರುವಂತ ಸಮೀಕ್ಷಾ ಕಾರ್ಯಕ್ಕೆ ಸರ್ವರ್ ಸಮಸ್ಯೆ ಎದುರಾಗಿದೆ. ಈ ಹಿನ್ನಲೆಯಲ್ಲಿ ನಾಳೆ ಎಲ್ಲಾ ಅಧಿಕಾರಿಗಳೊಂದಿಗೆ ಸಿಎಂ ಸಿದ್ಧರಾಮಯ್ಯ ಮಹತ್ವದ ವೀಡಿಯೋ ಸಂವಾದವನ್ನು ನಡೆಸಲಿದ್ದಾರೆ.
ನಾಳೆ ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕುರಿತಂತೆ ಎಲ್ಲಾ ಅಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಲಿದ್ದಾರೆ. ಈ ಹಿನ್ನಲೆಯಲ್ಲಿ ಸಮೀಕ್ಷೆಗೆ ಸಂಬಂಧಿಸಿದಂತ ಎಲ್ಲಾ ಅಧಿಕಾರಿಗಳು ಸಭೆಯಲ್ಲಿ ತಪ್ಪದೇ ಭಾಗಿಯಾಗುವಂತೆ ಖಡಕ್ ಸೂಚನೆಯನ್ನು ನೀಡಿದ್ದಾರೆ.
ನಾಳೆಯ ಸಿಎಂ ಸಿದ್ಧರಾಮಯ್ಯ ನೇತೃತ್ವದ ವೀಡಿಯೋ ಸಂವಾದ ಸಭೆಯಲ್ಲಿ ಜಾತಿಗಣತಿಗೆ ಅಡ್ಡಿಯಾಗಿರುವಂತ ಸರ್ವರ್ ಸಮಸ್ಯೆ ಸೇರಿದಂತೆ ಹಲವು ವಿಚಾರಗಳ ಕುರಿತಂತೆ ಚರ್ಚೆಯಾಗುವ ನಿರೀಕ್ಷೆಯಿದೆ.
ಜಾತಿಗಣತಿ ಸಮೀಕ್ಷೆಗೆ ಸಿಎಂ ಸಿದ್ಧರಾಮಯ್ಯಗೆ ಬೆಂಬಲವಾಗಿ ನಿಲ್ಲಲು ಹಿಂದುಳಿದ ವರ್ಗಗಳ ಮುಖಂಡರು ನಿರ್ಧಾರ