ಬೆಂಗಳೂರು: ರಾಜ್ಯದ ರಾಜಧಾನಿ ಜನರಿಗೆ ಬಿಗ್ ಶಾಕ್ ಎನ್ನುವಂತೆ ಇನ್ಮುಂದೆ ಬೆಂಗಳೂರಲ್ಲಿ ಕಸಕ್ಕೂ ಸೇವಾ ಶುಲ್ಕ ಪಾವತಿಸಬೇಕಾಗಿದೆ. ಇದು ಏಪ್ರಿಲ್ 1ರಿಂದಲೇ ಜಾರಿಗೆ ಬರಲಿದೆ ಎಂಬುದಾಗಿ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಕಸಕ್ಕೂ ಸೇವಾ ಶುಲ್ಕ ನಿಗದಿ ಪಡಿಸಲಾಗಿದೆ. ಇದು ತೆರಿಗೆ ಅಲ್ಲ. ಕೇವಲ ಸರ್ವೀಸ್ ಚಾರ್ಜ್ ಆಗಿರುತ್ತದೆ. ಪ್ರಾಪರ್ಟಿ ಟ್ಯಾಕ್ಸ್ ಜೊತೆಗೆ ವರ್ಷಕ್ಕೆ ಎರಡು ಬಾರಿ ಹಣ ಕಟ್ಟಬಹುದು ಎಂದರು.
ವಿದ್ಯುತ್ ಬಿಲ್ ರೀತಿಯಲ್ಲೇ ಬೆಂಗಳೂರಲ್ಲಿ ಪ್ರತಿ ಮನೆ ಮನೆಗೆ ಹೋಗಿ ಸಂಗ್ರಹಿಸಲು ಸಾಧ್ಯವಿಲ್ಲ. ಹೀಗಾಗಿ ಸರ್ವೀಸ್ ಚಾರ್ಜ್ ರೀತಿಯಲ್ಲಿ ಬಿಬಿಎಂಪಿ ತೆರಿಗೆಯಲ್ಲೇ ಆಡ್ ಮಾಡಲಾಗುತ್ತದೆ ಎಂದು ಹೇಳಿದರು.
ಬೆಂಗಳೂರಲ್ಲಿ ಒಂದು ದಿನ ಕಸ ವಿಲೇವಾರಿ ಸ್ಥಗಿತಗೊಂಡಿತ್ತು. ಅದು ಸರಿಯಾಗಿದ್ದು, ರಾತ್ರಿಯಿಡಿ ಆನ್ ಲೋಡ್ ಮಾಡಲಾಗುತ್ತಿದೆ. ಮನವೊಲಿಕೆ ಯಶಸ್ವಿಯಾಗಿದ್ದು, ರಾತ್ರಿ ವೇಳೆ ಕಸ ವಿಲೇವಾರಿ ಆಗಲಿದೆ ಎಂಬುದಾಗಿ ತಿಳಿಸಿದರು.
ಚಿನ್ನ ಸಾಗಾಟ ಕೇಸ್: ನಟಿ ರನ್ಯಾ ರಾವ್ ಜಾಮೀನು ಕೋರಿ ಸೆಷನ್ಸ್ ಕೋರ್ಟ್ ಗೆ ಅರ್ಜಿ ಸಲ್ಲಿಕೆ | Actress Ranya Rao
BREAKING : ಶಿವಮೊಗ್ಗದಲ್ಲಿ ಘೋರ ದುರಂತ : ಮೋಟಾರ್ ಸ್ಟಾರ್ಟ್ ಮಾಡುವಾಗ ವಿದ್ಯುತ್ ತಗುಲಿ ಯುವತಿ ಸಾವು!