ಬೆಂಗಳೂರು: ಅತಿಥಿ ಉಪನ್ಯಾಸಕರ ಸೇವೆ ಖಾಯಂ ಸಾಧ್ಯವಿಲ್ಲ ಅಂತ ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಅವರು ಹೇಳಿದ್ದಾರೆ. ಅವರು ಈ ಬಗ್ಗೆ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದರು.
ಇದೇ ವೇಳೆ ಅವರು ಮಾತನಾಡಿ, ಅತಿಥಿ ಉಪನ್ಯಾಸಕರ ಸೇವೆ ಕಾಯಮಾತಿಗೆ ಕಾನೂನಿನ ತೊಡಕು ಇರುವುದರಿಂದ ಸೇವೆ ಕಾಯಂ ಮಾಡಲು ಸಾಧ್ಯವಿಲ್ಲ ಅಂತ ಸ್ಪಷ್ಟೀಕರಣ ನೀಡಿದ್ದಾರೆ. ಇದೇ ವೇಳೇ ಅವರು ಅತಿಥಿ ಉಪನ್ಯಾಸಕರ ಖಾಯಮಾತಿಗೆ ಕಾನೂನು ತೊಡಕಿದೆ. ನಾವು ಏನೇ ಮಾಡಿದರು ನ್ಯಾಯಾಲಯದಲ್ಲಿ ಸಮಸ್ಯೆ ಆಗಬಹುದು ಎಂದು ಸಚಿವ ಎಂ ಸಿ ಸುಧಾಕರ್ ಹೇಳಿದರು. ಇದೇ ವೇಳೇ ಅವರು 7,000 ಹುದ್ದೆ ಹೆಚ್ಚುವರಿ ನೇಮಕಾತಿ ಮಾಡಲು ಬೇಡಿಕೆ ಇದೆ. 1,242 ಖಾಲಿ ಹುದ್ದೆ ಭರ್ತಿ ಮಾಡಬೇಕಾಗಿದೆ. ಇದಕ್ಕೆ ಪ್ರಕ್ರಿಯೆ ನಡೆದಿದೆ. ಕ್ಲಸ್ಟರ್ ವಿವಿಗಳಿಗೆ ಸಹಾಯಕ ಪ್ರಾಧ್ಯಾಪಕರ 250 ಹುದ್ದೆ ಖಾಲಿ ಇವೆ. 450-500 ಹೆಚ್ಚುವರಿ ಹುದ್ದೆ ಭರ್ತಿಗೆ ಹಣಕಾಸು ಇಲಾಖೆ ಅನುಮತಿ ಪಡೆದು ನೇಮಕಾತಿಗೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.