ಬೆಳಗಾವಿ : ಮುಂದಿನ ಬಜೆಟ್ ರೈತರಿಗಾಗಿ ಇನ್ನೂ ಹಲವಾರು ಯೋಜನೆ ರೂಪಿಸಲಿದ್ದೇವೆ ಎಂದು ಸಿಎಂ ಬೊಮ್ಮಾಯಿ ಘೋಷಣೆ ಮಾಡಿದರು.
ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಮಾತನಾಡಿದ್ದು, ನಮ್ಮ ಸರ್ಕಾರ ಯಾವಾಗಲೂ ರೈತರ ಪರ ಇದೆ, ಮುಂದಿನ ಬಜೆಟ್ನಲ್ಲಿ ರೈತರಿಗಾಗಿ ಇನ್ನೂ ಹಲವಾರು ಯೋಜನೆ ರೂಪಿಸಲಿದ್ದೇವೆ ಎಂದು ಹೇಳಿದರು.
ನಾನು ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ರೈತರ ಮಕ್ಕಳಿಗಾಗಿ ವಿದ್ಯಾ ನಿಧಿ ಯೋಜನೆ ತಂದಿದ್ದೇನೆ. ಯಶಸ್ವಿನಿ ಯೋಜನೆ, ಹಾಲು ಉತ್ಪಾದಕರಿಗೆ ನೆರವು ಸೇರಿ ಹಲವು ಯೋಜನೆಗಳನ್ನು ನೀಡುತ್ತಿದ್ದೇವೆ, ಮುಂದಿನ ಬಜೆಟ್ನಲ್ಲಿ ರೈತರಿಗಾಗಿ ಇನ್ನೂ ಹಲವಾರು ಯೋಜನೆ ರೂಪಿಸಲಿದ್ದೇವೆ, ಮುಂದಿನ ಬಜೆಟ್ನಲ್ಲಿ ರೈತರಿಗಾಗಿ ಇನ್ನೂ ಹಲವಾರು ಯೋಜನೆ ರೂಪಿಸಲಿದ್ದೇವೆ ಎಂದು ಭರವಸೆ ನೀಡಿದರು.
ಪೌರ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಆದ್ಯತೆ
ಯಾವುದೇ ಕಾರಣಕ್ಕೂ ಪೌರನೌಕಕರ ಮಕ್ಕಳ ಶಿಕ್ಷಣಕ್ಕೆ ತಡೆಯುಂಟಾಗಬಾರದು. ಪೌರನೌಕರರ ಮಕ್ಕಳ ಶಿಕ್ಷಣಕ್ಕೆ ಯಾವುದೇ ಸಮಸ್ಯೆ ಬಂದರೂ ಸರ್ಕಾರ ಪರಿಹಾರ ಒದಗಿಸುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು ಅವರು ಇಂದು ಬೆಳಗಾವಿಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇಮಕವಾದ ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರ ವಿತರಿಸಿ ಮಾತನಾಡಿದರು. ರಾಜ್ಯದಲ್ಲಿ 11133 ಪೌರ ಕಾರ್ಮಿಕರ ನೌಕರಿಯನ್ನು ಖಾಯಂಗೊಳಿಸಲಾಗಿದೆ. ಕರ್ನಾಟಕದಲ್ಲಿ ಸುಮಾರು 42 ಸಾವಿರ ಪೌರಕಾರ್ಮಿಕರಿದ್ದು, ಮುಂದಿನ ದಿನಗಳಲ್ಲಿ ಇವರೆಲ್ಲರಿಗೂ ಖಾಯಂ ನೇಮಕಾತಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಪೌರ ಕಾರ್ಮಿಕರ ಮಕ್ಕಳು ವಿದ್ಯಾವಂತರಾಗಿ ಎಲ್ಲರಂತೆಯೇ ಉನ್ನತ ಹುದ್ದೆಗಳಿಗೆ ಹೋಗಬೇಕು. ಈ ರೀತಿ ಸಾಮಾಜಿಕ ಬದಲಾವಣೆಯನ್ನು ತರಲಾಗುತ್ತದೆ. ಎಸ್ ಸಿ ಎಸ್ ಟಿ ಜನಾಂಗಕ್ಕೆ ಮೀಸಲಾತಿ ಹೆಚ್ಚಳ ಮಾಡಲಾಗಿದೆ. ಈ ನಿರ್ಣಯಕ್ಕೆ ಗಟ್ಟಿಯಾಗಿ ನಿಲ್ಲಲು ಸರ್ಕಾರ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತದೆ. ಪೌರನೌಕಕರ ಸೇವೆಯನ್ನು ಸರ್ಕಾರ ಗುರುತಿಸಿದೆ. ಬರುವ ದಿನಗಳಲ್ಲಿ ಪೌರನೌಕರರ ಮಕ್ಕಳಿಗೆ ಉತ್ತಮ ವಿದ್ಯೆ ನೀಡಿ, ಅವರ ಭವಿಷ್ಯವನ್ನು ಉಜ್ವಲಗೊಳಿಸಬೇಕು. ಇದಕ್ಕೆ ಸರ್ಕಾರ ಎಲ್ಲ ಸಹಕಾರ ನೀಡುತ್ತದೆ ಎಂದರು.ರಾಜ್ಯದಲ್ಲಿ 11133 ಪೌರ ಕಾರ್ಮಿಕರ ನೌಕರಿಯನ್ನು ಖಾಯಂಗೊಳಿಸಲಾಗಿದೆ. ಕರ್ನಾಟಕದಲ್ಲಿ ಸುಮಾರು 42 ಸಾವಿರ ಪೌರಕಾರ್ಮಿಕರಿದ್ದು, ಮುಂದಿನ ದಿನಗಳಲ್ಲಿ ಇವರೆಲ್ಲರಿಗೂ ಖಾಯಂ ನೇಮಕಾತಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
BIGG NEWS : ಜ. 27ರಿಂದ 3 ದಿನ ಅದ್ದೂರಿ ‘ಹಂಪಿ ಉತ್ಸವ’ ನಡೆಸಲು ರಾಜ್ಯ ಸರ್ಕಾರ ತೀರ್ಮಾನ |Hampi Utsav 2023
BIGG NEWS : ರಾಜ್ಯದ ಪೌರಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಆದ್ಯತೆ : ಸಿಎಂ ಬೊಮ್ಮಾಯಿ ಘೋಷಣೆ