ಶಿವಮೊಗ್ಗ: ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳು ತಿರುವಿನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕ್ಯಾಂಟರ್ ನಡುವೆ ಅಪಘಾತ ಉಂಟಾಗಿದೆ. ಈ ಅಪಘಾತದಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸಾಗರದ ಆನಂದಪುರ ಸಮೀಪದ ಮುಂಬಾಳು ತಿರುವಿನಲ್ಲಿ ಸಾರಿಗೆ ಬಸ್ ಹಾಗೂ ಕ್ಯಾಂಟರ್ ನಡುವೆ ಭೀಕರ ಅಪಘಾತ ಉಂಟಾಗಿದೆ. ಸಾರಿಗೆ ಬಸ್ಸಿನಲ್ಲಿ ವಿದ್ಯಾರ್ಥಿಗಳೇ ಹೆಚ್ಚಿದ್ದರಿಂದ ಹಲವರಿಗೆ ಗಂಭೀರ ಗಾಯವಾಗಿರೋದಾಗಿ ತಿಳಿದು ಬಂದಿದೆ.
ಸಾರಿಗೆ ಬಸ್ ಚಾಲಕ, ನಾಲ್ಕೈದು ವಿದ್ಯಾರ್ಥಿಗಳ ಸ್ಥಿತಿ ಗಂಭೀರ ಎಂದು ಹೇಳಲಾಗುತ್ತಿದೆ. ಗಾಯಾಳುಗಳನ್ನು ಸಾಗರದ ಮರ್ಕಜ್ ಶಾಲೆಯ ವಿದ್ಯಾರ್ಥಿಗಳನ್ನು ಕರೆತರಲು ತೆರಳುತ್ತಿದ್ದಂತ ಶಾಲಾ ಬಸ್ಸಿನಲ್ಲೇ ಆನಂದಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.
ಮುಂಬಾಳು ಪ್ರದೇಶದ ಸ್ಥಳೀಯರು, ಮುಂಬಾಳು ಹಿಸಾಬಾ ಸಮಿತಿಯ ಉಸ್ಮಾನ್ ಹಾಗೂ ಮರ್ಕಜ್ ಬಸ್ಸಿನ ಚಾಲಕ ಜಿಯಾವುಲ್ಲಾ ಅವರು ಅಪಘಾತದಲ್ಲಿ ಗಾಯಗೊಂಡಿದ್ದಂತ ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವಲ್ಲಿ ಮಾನವೀಯತೆ ಮೆರೆದಿದ್ದಾರೆ. ಅವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ವರದಿ: ರಫೀಕ್ ಎಂ ಬ್ಯಾರಿ, ಸಾಗರ