ಚಾಮರಾಜನಗರ : ಚಾಮರಾಜನಗರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಗೂಡ್ಸ್ ಆಟೋ ಪಲ್ಟಿಯಾಗಿ 13 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣ ಸಮೀಪದ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ಗುಂಡ್ಲುಪೇಟೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದ 13 ಜನರು ಗಾಯಗೊಂಡಿದ್ದಾರೆ. ಮಲೆ ಮಹದೇಶ್ವರ ಬೆಟ್ಟಕ್ಕೆ ಗೂಡ್ಸ್ ಆಟೋದಲ್ಲಿ ತೆರಳುತ್ತಿದ್ದಾಗ ಯಳಂದೂರು ಬಳಿ ಅಡ್ಡ ಬಂದ ಬೈಕ್ಗೆ ಡಿಕ್ಕಿಯಾಗುವುದನ್ನು ತಪ್ಪಿಸುವ ಸಮಯದಲ್ಲಿ ಆಟೋ ರಸ್ತೆ ಬದಿಗೆ ಪಲ್ಟಿಯಾಗಿದೆ.
ಗಾಯಗೊಂಡ 13 ಮಂದಿಯಲ್ಲಿ 9 ಮಂದಿಗೆ ತೀವ್ರ ಗಾಯಗಳಾದ ಹಿನ್ನೆಲೆ ಜಿಲ್ಲಾಸ್ಪತ್ರೆ ಸಿಮ್ಸ್ಗೆ ರವಾನೆ ಮಾಡಲಾಗಿದ್ದು, ಉಳಿದವರಿಗೆ ಯಳಂದೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಯಳಂದೂರು ಪೊಲೀಸರು ಭೇಟಿ ಕೊಟ್ಟು ಮುಂದಿನ ಕ್ರಮ ಕೈಗೊಂಡಿದ್ದಾರೆ.








