ಮೈಸೂರು : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ದಂಪತಿ ತೆರಳುತ್ತಿದ್ದ ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ತೆರಳುತ್ತಿದ್ದ ಪತ್ನಿ ಸಾವನ್ನಪ್ಪಿದ್ದು ಪತಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಮೈಸೂರಲ್ಲಿ ನಡೆದಿದೆ.
ಮೈಸೂರು ಜಿಲ್ಲೆಯ ನಂಜನಗೂಡು ಫ್ಲೈ ಓವರ್ ಬಳಿ ಅಪಘಾತ ಸಂಭವಿಸಿದೆ. ಪತ್ನಿ ರಾಣಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತಿ ನಾಗೇಂದ್ರಗೆ ಗಂಭೀರವಾದ ಗಾಯಗಳಾಗಿವೆ. ಮದುವೆ ಕಾರ್ಯಕ್ರಮ ಮುಗಿಸಿ ಮೈಸೂರಿಗೆ ದಂಪತಿಗಳು ತೆರಳುತ್ತಿದ್ದರು.ಈ ವೇಳೆ ವೇಗವಾಗಿ ಬಂದಂತಹ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ನಂಜನಗೂಡು ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.








