ಮೈಸೂರು : ಮೈಸೂರಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಕಾರು ಮತ್ತು ಆಟೋ ಮುಖಾಮುಖಿಯಾಗಿ ಡಿಕ್ಕಿ ಹೊಡೆದು, ಸುಮರು 10ಕ್ಕೂ ಹೆಚ್ಚು ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ಚೌಹಳ್ಳಿ ಬಳಿ ಈ ಒಂದು ಅಪಘಾತ ಸಂಭವಿಸಿದೆ.
ಆಟೋದಲ್ಲಿ ಇದ್ದ 10ಕ್ಕೂ ಹೆಚ್ಚು ಜನರಿಗೆ ಗಂಭೀರವಾದ ಗಾಯಗಳಾಗಿವೆ. ತಕ್ಷಣ ಗಾಯಾಳುಗಳನ್ನು ಮೈಸೂರಿನ ಕೆಆರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದಲ್ಲಿ ಕಾರು ಮತ್ತು ಆಟೋ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಟಿ ನರಸೀಪುರ ಪೊಲೀಸ್ ಠಾಣೆಯಲ್ಲಿ ಕುರಿತು ಪ್ರಕರಣ ದಾಖಲಾಗಿದೆ.








