ಬೆಂಗಳೂರು : ನಿನ್ನೆ ಬೆಂಗಳೂರಲ್ಲಿ ಭಾರಿ ಮಳೆ ಸುರಿದಿದ್ದು, ಮಹದೇವಪುರದ ಹೂಡಿಯಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದರೆ, ಮೈಸೂರು ರಸ್ತೆಯ ಬಿಜಿಎಸ್ ಮೇಲ್ಸೇತುವೆ, ಹೆಬ್ಬಾಳದ ಮುಖ್ಯ ರಸ್ತೆಯಲ್ಲಿ ಭಾರೀ ಪ್ರಮಾಣದ ಮಳೆ ನೀರು ನಿಂತು ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು.
ಅಲ್ಲದೇ ಭಾರಿ ಮಳೆಯಿಂದಾಗಿ ಬೆಂಗಳೂರಲ್ಲಿ ಸುಮಾರು 20ಕ್ಕೂ ಹೆಚ್ಚು ಮರಗಳು ಧರೆಗುರುಳಿವೆ. ಕಳೆದ ಎರಡ್ಮೂರು ದಿನದಿಂದ ನಗರದಲ್ಲಿ ಮಳೆ ಚುರುಕುಗೊಂಡಿದ್ದು, ಶನಿವಾರ ರಾತ್ರಿಯಿಂದ ಸಣ್ಣ ಪ್ರಮಾಣ ಮಳೆ ಆರಂಭಗೊಂಡಿತ್ತು. ಭಾನುವಾರ ಬೆಳಿಗ್ಗೆಯಿಂದ ನಗರದಲ್ಲಿ ಮೋಡ ಕವಿದ ವಾತಾವರಣ ಕಂಡು ಬಂತು. ನಗರದ ಕೆಲವು ಭಾಗದಲ್ಲಿ ಭಾರೀ ಮಳೆ ಸುರಿಯಿತು.