ಬೆಂಗಳೂರು: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಅಲ್ಲದೇ ಮಹಿಳೆಯೊಬ್ಬರ ಅಪಹರಣದ ಪ್ರತ್ಯೇಕ ಎಫ್ಐಆರ್ ಗೆ ಸಂಬಂಧಿಸಿದಂತೆ ರೇವಣ್ಣ ಸಲ್ಲಿಸಿದ್ದಂತ ಮಧ್ಯಂತರ ಜಾಮೀನು ಮಂಜೂರಾತಿಯನ್ನು ತಕ್ಷಣವೇ ಪರಿಗಣಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರಾಕರಿಸಿದೆ. ಆದ್ರೇ ನಾಳೆಗೆ ವಿಚಾರಣೆ ಮುಂದೂಡಿದ್ದು, ವಾದ ಆಲಿಸಿದ ನಂತ್ರ ಆದೇಶ ನೀಡುವುದಾಗಿ ಹೇಳಿದೆ.
ಶಾಸಕ ಹೆಚ್.ಡಿ ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದಂತ ಸಂತೋಷ ಗಜಾನನ ಭಟ್ ಇಂದು ನಡೆಸಿದರು.
ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆಯ ವೇಳೆಯಲ್ಲಿ ರೇವಣ್ಣ ಪರವಾಗಿ ಹಿರಿಯ ವಕೀಲ ಮೂರ್ತಿ ಡಿ ನಾಯಕ್ 15 ನಿಮಿಷಗಳ ಕಾಲ ವಾದ ಮಂಡಿಸಿದರು. ಈ ವೇಳೆ ಮತ್ತೊಂದು ಎಫ್ಐಆರ್ ನಲ್ಲಿ ಮಹಿಳೆಯ ಹೆಸರು ಕಾಣಿಸುತ್ತಿಲ್ಲ. ಆದ್ದರಿಂದ ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ಮನವಿ ಮಾಡಿದರು.
ಈ ವಾದ ಆಲಿಸಿದಂತ ನ್ಯಾಯಪೀಠವು, ಈ ಪ್ರಕರಣವೂ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಹೊಂದಿಕೊಂಡ ಪ್ರಕರಣವೇ ಆಗಿರುವುದರಿಂದ ನಾಳೆ ಬೆಳಿಗ್ಗೆ ಮುಖ್ಯ ಪ್ರಕರಣದ ಮೇಲೆಯೇ ಸಂಪೂರ್ಣ ವಾದ ಆಲಿಸಿ, ನಂತ್ರ ಆದೇಶ ಪ್ರಕಟಿಸುವುದಾಗಿ, ನಿರೀಕ್ಷಣಾ ಜಾಮೀನಿನ ಅರ್ಜಿಯ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.
BREAKING : ಲೋಕಸಭಾ ಚುನಾವಣೆ : ರಾಯ್ ಬರೇಲಿ ಕ್ಷೇತ್ರದಿಂದ ‘ರಾಹುಲ್ ಗಾಂಧಿ’ ನಾಮಪತ್ರ ಸಲ್ಲಿಕೆ
ಕೋವಿಶೀಲ್ಡ್ ಬಗ್ಗೆ ಯಾವುದೇ ಸುತ್ತೋಲೆ ಹೊರಡಿಸಿಲ್ಲ: ಸ್ಪಷ್ಟನೆ ನೀಡಿದ ಆರೋಗ್ಯ ಇಲಾಖೆ