ಬೆಂಗಳೂರು : ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು 42ನೇ ಎಸಿಎಂ ಎಂ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ ಹಾಗಾಗಿ ಇದೀಗ ಹೆಚ್ ಡಿ ರೇವಣ್ಣ ಅವರು ನ್ಯಾಯಾಲಯಕ್ಕೆ ಆಗಮಿಸಿದ್ದಾರೆ.
ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರಾದ ಎಚ್ಡಿ ರೇವಣ್ಣ. ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಅರ್ಜಿ ವಿಚಾರಣೆ ಹಿನ್ನೆಲೆ ಇದೀಗ ಅವರು ಕೋರ್ಟ್ ಗೆ ಆಗಮಿಸಿದ್ದಾರೆ. ನಿನ್ನೆ ಎಚ್ ಡಿ ರೇವಣ್ಣಗೆ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಇಂದು ಮಧ್ಯಾಹ್ನದವರೆಗೆ ನ್ಯಾಯಾಲಯ ಜಾಮೀನು ನೀಡಿತ್ತು.ಇದೀಗ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ನ್ಯಾಯಾಲಯಕ್ಕೆ ಎಚ್ ಡಿ ರೇವಣ್ಣ ಹಾಜರಾಗಿದ್ದಾರೆ.ಹಾಗಾಗಿ ಕೆಲ ಹೊತ್ತಿನಲ್ಲಿ ಎಚ್ ಡಿ ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ