ಹಾಸನ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ಹಗರಣ ಕೇಸಿಗೆ ಸಂಬಂಧಪಟ್ಟಂತೆ ತನಿಖೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳ ತಂಡ ಇಂದು ಹೆಚ್.ಡಿ .ರೇವಣ್ಣ ಅವರ ವಿಚಾರಣೆ ನಡೆಸುವ ಸಾಧ್ಯತೆ ಇದೆ.

ಪ್ರಕರಣ ಸಂಬಂಧ ಮಾಜಿ ಸಚಿವ ಹೆಚ್.ಡಿ .ರೇವಣ್ಣ ಅವರು ಇಂದು ಎಸ್ ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ಹಾಸನದಲ್ಲಿರುವ ಹೆಚ್ ಡಿ ರೇವಣ್ಣ ನಿವಾಸ ಮತ್ತು ಫಾರ್ಮ್ ಹೌಸ್ ನಲ್ಲಿ ತಮ್ಮ ವಿರುದ್ಧ ರೇವಣ್ಣ ಮತ್ತು ಅವರ ಪುತ್ರ ಸಂಸದ ಪ್ರಜ್ವಲ್ ರೇವಣ್ಣ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಹಲವು ಮಹಿಳೆಯರು ಮತ್ತು ಯುವತಿಯರು ದೂರು ನೀಡಿರುವ ಹಿನ್ನೆಲೆಯಲ್ಲಿ ಎಸ್ ಐಟಿ ಅಧಿಕಾರಿಗಳ ತಂಡ ಹಾಸನದಲ್ಲಿ ತೀವ್ರ ತನಿಖೆ ನಡೆಸಲಿದ್ದಾರೆ.

ಮಾಜಿ ಸಚಿವ ಶಾಸಕ ಹೆಚ್ ಡಿ ರೇವಣ್ಣ ಅವರು ಎಸ್ ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ಈಗಾಗಲೇ ತಿಳಿಸಿದ್ದಾರೆ. ಪ್ರಕರಣದಲ್ಲಿ ಹೆಚ್ ಡಿ ರೇವಣ್ಣ ಎ1 ಮತ್ತು ಪ್ರಜ್ವಲ್ ರೇವಣ್ಣ ಎ2 ಆರೋಪಿಯಾಗಿದ್ದಾರೆ.

Share.
Exit mobile version