ಬೆಂಗಳೂರು: ಪುತ್ರ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಕೆ ಆರ್ ಪೇಟೆ ಪೊಲೀಸ್ ಠಾಣೆಯಲ್ಲಿ ಜಾಮೀನು ರಹಿತ ಸೆಕ್ಷನ್ ಅಡಿಯಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಹೆಚ್.ಡಿ ರೇವಣ್ಣ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಕೋರ್ಟ್, ವಿಚಾರಣೆಯನ್ನು ನಾಳೆ ಬೆಳಿಗ್ಗೆ 11 ಗಂಟೆಗೆ ಮುಂದೂಡಿಕೆ ಮಾಡಿತು.
ಇಂದು ಹೆಚ್ ಡಿ ರೇವಣ್ಣ ವಿರುದ್ಧ ಕೆ.ಆರ್ ನಗರ ಠಾಣೆಯಲ್ಲಿ ದಾಖಲಾಗಿದ್ದಂತ ಜಾಮೀನು ರಹಿತ ಸೆಕ್ಷನ್ ಕೇಸಿನಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಯಿತು. ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ನಡೆದಂತ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯ ವೇಳೆಯಲ್ಲಿ ಹೆಚ್.ಡಿ ರೇವಣ್ಣ ಪರವಾಗಿ ಹಿರಿಯ ವಕೀಲರು 364ಎ, 364 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂಬುದಾಗಿ ವಾದಿಸಿದರು.
ಅಲ್ಲದೇ ಕೆ ಆರ್ ಪೇಟೆ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಹಿಳೆ ಸಲ್ಲಿಸಿದ್ದಂತ ದೂರನ್ನು ನ್ಯಾಯಾಧೀಶರ ಮುಂದೆ ಓದಿ ಹೇಳಿದರು. ಅಂತಿಮವಾಗಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಹೆಚ್.ಡಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನಾಳೆ ಬೆಳಿಗ್ಗೆ 11ಕ್ಕೆ ಮುಂದೂಡಿಕೆ ಮಾಡಿದೆ.
ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಕೇಸ್: ಪ್ರಧಾನಿ ಮೋದಿಗೂ ಈ ಪ್ರಕರಣಕ್ಕೂ ಏನು ಸಂಬಂಧ?-HDK ಪ್ರಶ್ನೆ
BREAKING : ಲೋಕಸಭಾ ಚುನಾವಣೆ : ರಾಯ್ ಬರೇಲಿ ಕ್ಷೇತ್ರದಿಂದ ‘ರಾಹುಲ್ ಗಾಂಧಿ’ ನಾಮಪತ್ರ ಸಲ್ಲಿಕೆ