ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲಿ ಆರೋಪಿಯಾಗಿರುವ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಜಾಮೀನು ಅರ್ಜಿ ವಚಿಆರಣೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಇಂದು ನಡೆಯಲಿದೆ.
ಜಾಮೀನು ಅರ್ಜಿ ಸಂಬಂಧ ವಿಶೇಷ ನ್ಯಾಯಾಲಯ ವಾದ-ಪ್ರತಿವಾದ ಆಲಿಸಿದ್ದು, ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿತ್ತು. ಈ ಪ್ರಕರಣದಲಿ ಸದ್ಯ ರೇವಣ್ಣಗೆ ನೀಡಲಾಗಿರುವ ಮಧ್ಯಂತರ ಜಾಮೀನನ್ನೂ ಸೋಮವಾರದವರೆಗೆ ವಿಸ್ತರಿಸಿತ್ತು.
ಲೈಂಗಿಕ ದೌರ್ಜನ್ಯ ಆರೋಪದಡಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹಾಗೂ ಪುತ್ರ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರದಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ತೆಯ ಹೇಳಿಕೆ ಆಧರಿಸಿ ಪೊಲೀಸರು ಎಫ್ ಐಆರ್ ನಲ್ಲಿ ಪ್ರಜ್ವಲ್ ವಿರುದ್ಧ ಅತ್ಯಾಚಾರ ಸೆಕ್ಷನ್ ಸೇರ್ಪಡೆ ಮಾಡಿದ್ದಾರೆ. ಪ್ರಕರಣದ ಎರಡನೇ ಆರೋಪಿಯಾಗಿರುವ ಹೆಚ್.ಡಿ. ರೇವಣ್ಣ ಅವರ ಜಾಮೀನು ಭವಿಷ್ಯ ಇಂದು ನಿರ್ಧಾರವಾಗಲಿದೆ.