ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಪುರುಷತ್ವ ಪರೀಕ್ಷೆ ಒಳಪಡಿಸಲು ಎಸ್ ಐಟಿ ಅಧಿಕಾರಿಗಳು ತಯಾರಿ ನಡೆಸಿದ್ದಾರೆ.
ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಆವರಣದ ಆಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಸಂಶೋಧನಾ ಸಂಸ್ಥೆಯಲ್ಲಿ ಪ್ರಜ್ವಲ್ ರೇವಣ್ಣ ಅವರ ವೈದ್ಯಕೀಯ ತಪಾಸಣೆ ನಡೆದಿದೆ. ಈ ವೇಳೆ ಪುರುಷತ್ವ ಪರೀಕ್ಷೆಗೆ ಅವರಿಂದ ವೀರ್ಯ, ಮರ್ಮಾಂಗದ ಕೂದಲು ಹಾಗೂ ರಕ್ತ ಸಂಗ್ರಹಿಸಲಾಗಿದೆ ಎಂಬ ಮಾಹಿತಿ ಬಂದಿದೆ.
ಎಸ್ ಐಟಿ ಅಧಿಕಾರಿಗಳು ಕೋರ್ಟ್ ಅನುಮತಿ ಪಡೆದು ಪ್ರಜ್ವಲ್ ರೇವಣ್ಣ ಅವರನ್ನು ಪರುಷತ್ವ ಪರೀಕ್ಷೆಗೆ ಒಳಪಡಿಸಲು ಮುಂದಾಗಿದ್ದು, ಇದಕ್ಕಾಗಿ ತಜ್ಞರ ತಂಡ ರಚನೆಯಾಗಲಿದ್ದು, ಈ ತಜ್ಞರ ತಂಡ ತನ್ನ ವರದಿಯನ್ನು ಎಸ್ ಐಟಿಗೆ ಸಲ್ಲಿಸಲಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ಲೈಂಗಿಕ ಕ್ರಿಯೆ ನಡೆಸಲು ದೈಹಿಕವಾಗಿ ಆರೋಪಿ ಸಾಮರ್ಥ್ಯ ಹೊಂದಿದ್ದಾನೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಪುರುಷತ್ವ ಪರೀಕ್ಷೆ ಅಗತ್ಯವಾಗಿದೆ. ಈ ಕಾರಣಕ್ಕೆ ಎಸ್ ಐಟಿ ಅಧಿಕಾರಿಗಳು ಪುರಷತ್ವ ಪರೀಕ್ಷೆಗೆ ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.







