ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ 2ನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲೂ ಕೋರ್ಟ್ ಬಿಗ್ ಶಾಕ್ ನೀಡಿದೆ. ಅವರು ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಅವರಿಗೆ ಜೈಲೇಗತಿ ಎನ್ನುವಂತೆ ಆಗಿದೆ.
ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದಂತ 2ನೇ ಲೈಂಗಿಕ ಪ್ರಕರಣದ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದರು.
ಅಂದಹಾಗೇ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಎರಡು ಲೈಂಗಿಕ ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದಾವೆ. ಈ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವಂತ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ. ಅವರು ಇಂದು ಜಾಮೀನು ನಿರೀಕ್ಷೆಯಲ್ಲಿದ್ದರು. ಆದರೇ ಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನೇ ತಿರಸ್ಕರಿಸಿ ಬಿಗ್ ಶಾಕ್ ನೀಡಿದೆ.
BREAKING: ಮುಡಾ ಹಗರಣದ ಚರ್ಚೆಗೆ ಅವಕಾಶ ನೀಡದ ಹಿನ್ನಲೆ: 2 ಸದನಗಳಲ್ಲೂ ಅರೋಹಾತ್ರಿ ಧರಣಿಗೆ ಬಿಜೆಪಿ ನಿರ್ಧಾರ
ರಾಜ್ಯದ ‘ಗ್ರಾಮೀಣ ಜನತೆ’ಗೆ ಗುಡ್ ನ್ಯೂಸ್: ‘ಗ್ರಾಮಠಾಣ’ ಒಳಗಿನ, ಹೊರಗಿನ ‘ಆಸ್ತಿ ಅಳತೆ’ಗೆ ಅವಕಾಶ