ಹಾಸನ : ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಇಂದು ಮಾಜಿ ಸಂಸದ ಪ್ರಜಲ್ವ್ ರೇವಣ್ಣನನ್ನು ಹಾಸನಕ್ಕೆ ಕರೆದೊಯ್ದು ಎಸ್ ಐಟಿ ಅಧಿಕಾರಿಗಳು ಸ್ಥಳ ಮಹಜರು ನಡೆಸಿದ್ದಾರೆ.
ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿರುವ ಪ್ರಜ್ವಲ್ ರೇವಣ್ಣನನ್ನು ಬಾಡಿ ವಾರೆಂಟ್ ಪಡೆದು ಎಸ್ ಐಟಿ ಅಧಿಕಾರಿಗಳು ಕಸ್ಟಡಿಗೆ ಪಡೆದುಕೊಂಡಿದ್ದು, ಇಂದು ಹೆಚ್ಚಿನ ವಿಚಾರಣೆಗೆ ಹಾಸನದ ಪ್ರಜ್ವಲ್ ರೇವಣ್ಣನ ನಿವಾಸದಲ್ಲಿ ಸ್ಥಳ ಮಹಜರು ನಡೆಸಲಾಗಿದೆ.
ಮಹಿಳೆ ವಿರುದ್ಧ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ವಿರುದ್ಧ ಹಾಸನ ಜಿಲ್ಲೆಯ ಹೊಳೆನರಸೀಪರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಇಂದು ಎಸ್ ಐಟಿ ಅಧಿಕಾರಿಗಳು ಹಾಸನದ ನಿವಾಸದಲ್ಲಿ ಸ್ಥಳ ಮಹಜರು ನಡೆಸಿದ್ದಾರೆ.