ಹಾಸನ : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಸಂಸದರ ಗೆಸ್ಟ್ ಹೌಸ್ ನಲ್ಲಿ ಪ್ರಜ್ವಲ್ ರೇವಣ್ಣ ಅವರು ಚಿತ್ರೀಕರಣ ಮಾಡಿದ್ದಾರೆ ಎಂದು ಶಂಕಿಸಲಾಗಿದ್ದು ಈ ಹಿನ್ನೆಲೆಯಲ್ಲಿ SIT ತಂಡ ಈ ಒಂದು ಗೆಸ್ಟ್ ಹೌಸ್ ಅನ್ನು ಪರಿಶೀಲನೆ ನಡೆಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಕಳೆದ 5 ವರ್ಷಗಳ ಹಿಂದೆ ಈ ಒಂದು ಗೆಸ್ಟ್ ಹೌಸ್ ಉದ್ಘಾಟನೆಯಾಗಿತ್ತು ಎಂದು ಹೇಳಲಾಗುತ್ತಿದೆ. ಇದೀಗ ಎಂಪಿ ಗೆಸ್ಟ್ ಹೌಸಿನಲ್ಲಿ ಚಿತ್ರೀಕರಣ ಮಾಡಿರುವ ಶಂಕೆ ವ್ಯಕ್ತವಾಗುತ್ತಿದ್ದೂ, SIT ತಂಡ ವಿಡಿಯೋ ಪರಿಶೀಲನೆ ನಡೆಸುವ ಸಾಧ್ಯತೆ ಇದೆ.ವಾರದಲ್ಲಿ ನಾಲ್ಕು ದಿನ ಸರಕಾರಿ ಗೆಸ್ಟ್ ಹೌಸ್ ನಲ್ಲಿ ಪ್ರಜ್ವಲ್ ರೇವಣ್ಣ ಇರುತ್ತಿದ್ದರು ಎಂದು ಹೇಳಲಾಗುತ್ತಿದೆ.
ಈ ವೇಳೆ ನೂರಾರು ಸಂಖ್ಯೆಯಲ್ಲಿ ಜನರು ಪ್ರಜ್ವಲ್ ರೇವಣ್ಣ ಅವರನ್ನು ಭೇಟಿಯಾಗಲು ಗೆಸ್ಟ್ ಹೌಸ್ ಗೆ ಆಗಮಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಕಳೆದ 28 ರಂದು ಅಶ್ಲೀಲ ವಿಡಿಯೋ ಬಹಿರಂಗವಾಗುತ್ತಿದ್ದಂತೆ ಅಂದು ಕೂಡ ಪ್ರಜ್ವಲ್ ರೇವಣ್ಣ ಅವರು ಅದೇ ಗೆಸ್ಟ್ ಹೌಸಿನಲ್ಲಿ ಇದ್ದರು ಎಂದು ಬಲಮೂಲಗಳಿಂದ ತಿಳಿದು ಬಂದಿದೆ. ಹೀಗಾಗಿ ಎಸ್ ಐ ಟಿ ಈಗ ಗೆಸ್ಟ್ ಹೌಸ್ ಪರಿಶೀಲನೆ ನಡೆಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.