ಬೆಂಗಳೂರು: ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಆರೋಪದ ಅಡಿಯಲ್ಲಿ ಡಿಜೆ ಹಳ್ಳಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸುನೀಲ್ ಹಾಗೂ ಎಎಸ್ಐ ಪ್ರಕಾಶ್ ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್ ಕಮೀಷನರ್ ಸೀಮಂತ್ ಕುಮಾರ್ ಸಿಂಗ್ ಆದೇಶಿಸಿದ್ದಾರೆ.
ಈ ಕುರಿತಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ 36 ವರ್ಷದ ಮಹಿಳೆಯೊಬ್ಬರು ಲಿಖಿತ ದೂರು ನೀಡಿದ್ದರು. ಮಹಿಳೆಯ ದೂರು ಆಧರಿಸಿ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಡಿಜೆ ಹಳ್ಳಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಸುನೀಲ್, ಎಎಸ್ಐ ಪ್ರಕಾಶ್ ವಿರುದ್ಧ ಕೇಸ್ ದಾಖಲಾಗಿತ್ತು. ಹೀಗಾಗಿ ಇಬ್ಬರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದಾರೆ.
ಅಂದಹಾಗೇ ಡಿಜೆ ಹಳ್ಳಿ ಠಾಣೆಯ ಇನ್ಸ್ ಪೆಕ್ಟರ್ ಸುನೀಲ್ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಮದುವೆಯಾಗುವುದಾಗಿ ನಂಬಿಸಿ 36 ವರ್ಷದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು. ಅಲ್ಲದೇ ಪೋಟೋ, ವೀಡಿಯೋ ಇಟ್ಟುಕೊಂಡು ಈ ವಿಷಯ ಬಹಿರಂಗಪಡಿಸಿದ್ರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು ಎಂಬುದಾಗಿ ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದರು.
ಇದಷ್ಟೇ ಅಲ್ಲದೇ ಮನೆ ಕೊಡಿಸುತ್ತೇನೆ, ಬ್ಯೂಟಿ ಪಾರ್ಲರ್ ನಿರ್ಮಿಸಿಕೊಡುವುದಾಗಿ ಹೇಳಿ 8ನೇ ಮೈಲಿಯಲ್ಲಿರುವಂತ ಮನೆ, ಹೋಟೆಲ್ ಗೆ ಕರೆದೊಯ್ದು ಕೃತ್ಯ ಎಸಗಿದ್ದಾಗಿಯೂ ಮಹಿಳೆ ದೂರಿನಲ್ಲಿ ತಿಳಿಸಿದ್ದರು. ಈ ದೂರಿನ ಹಿನ್ನಲೆಯಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.
BIG NEWS: ಒಪ್ಪಿಗೆಯಿಂದ ಆರಂಭಗೊಂಡ ಸಂಬಂಧ ನಿರಾಸೆಯಲ್ಲಿ ಅಂತ್ಯಗೊಂಡರೆ ಅಪರಾಧವಲ್ಲ: ಹೈಕೋರ್ಟ್
ಪ್ರೇಯಸಿಯೊಂದಿಗೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಪತಿರಾಯ: ಪತ್ನಿ ಧರ್ಮದೇಟು
ಸಾರ್ವಜನಿಕರೇ ಗಮನಿಸಿ : ನವೆಂಬರ್ 1 ರಿಂದ `ಆಧಾರ್ ಕಾರ್ಡ್ ಅಪ್ ಡೇಟ್’ ನಿಯಮಗಳಲ್ಲಿ ಮಹತ್ವದ ಬದಲಾವಣೆ








