ಕೇರಳ : ಹಲವಾರು ಮಹಿಳೆಯರಿಂದ ಲೈಂಗಿಕ ದೌರ್ಜನ್ಯದ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಮಮ್‌ಕೂಟತಿಲ್ ರಾಜೀನಾಮೆ ನೀಡಿದ ಒಂದು ದಿನದ ನಂತರ, ಇದೀಗ ಶಾಸಕ ರಾಹುಲ್ ನನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಳಿಸಿದೆ.
ಹೌದು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಶಾಸಕ ರಾಹುಲ್ ಮಮಕೂಟತಿಲ್ ನನ್ನ ಇದೀಗ ಕಾಂಗ್ರೆಸ್ ಅಮಾನತು ಗೊಳಿಸಿದೆ. ಕೇರಳದ ಪಾಲಕ್ಕಾಡ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ರಾಹುಲ್ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಇದೀಗ ಕಾಂಗ್ರೆಸ್ ಅಮಾನತುಗೊಳಿಸಿದೆ.