ಬೆಂಗಳೂರು : ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇಲೆ ಹೊಳೆನರಸೀಪುರ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರ ಮೇಲೆ ಎಫ್ ಐ ಆರ್ ದಾಖಲಾಗಿತ್ತು. ಈ ಒಂದು FIR ಗೊಳಿಸುವಂತೆ ಕೋರಿ ಹೆಚ್ ಡಿ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಅಕ್ಟೋಬರ್ 30ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.
ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ರೇವಣ್ಣ ವಿರುದ್ಧ ದಾಖಲಾಗಿದ್ದ ಈ FIR ರದ್ದು ಸಂಬಂಧದ ಅರ್ಜಿ ವಿಚಾರಣೆ ಇಂದು ನಡೆಸಿರುವ ಹೈಕೋರ್ಟ್ನ ನ್ಯಾ.ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠವು, ಕಾಲಾವಕಾಶದ ಕೊರತೆಯ ಹಿನ್ನೆಲೆಯಲ್ಲಿ ಮುಂದಿನ ವಿಚಾರಣೆಯನ್ನು ಅ.30ಕ್ಕೆ ಮುಂದೂಡಿದೆ.