BIGG NEWS : ಕುಕ್ಕೆ ಸುಬ್ರಹ್ಮಣ್ಯದಲ್ಲಿ ‘ಷಷ್ಟಿ ಸಂಭ್ರಮ’ : ನಾಗ ದೇವರ ದರ್ಶನ ಪಡೆದು ಪುನೀತರಾದ ಭಕ್ತರು

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿಯ ಸಂಭ್ರಮ ಮನೆ ಮಾಡಿದ್ದು, ಸಹಸ್ರಾರು ಮಂದಿ ಸುಬ್ರಹ್ಮಣ್ಯನ ದರ್ಶನ ಮಾಡಿ ಪುನೀತರಾಗುತ್ತಿದ್ದಾರೆ. ಕರ್ನಾಟಕದ ಪ್ರಸಿದ್ಧ ನಾಗಕ್ಷೇತ್ರ, ಯಾತ್ರಾಸ್ಥಳ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿ) ಪ್ರಯುಕ್ತ ಕ್ಷೇತ್ರದ ದೇವರಾ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ನಡೆಯುತ್ತಿದೆ. ಇಂದು ಬೆಳಿಗ್ಗೆ 7.05ರ ವೃಶ್ಚಿಕ ಲಗ್ನದಲ್ಲಿ ದೇವರ ವಿಗ್ರಹಗಳ ಬ್ರಹ್ಮರಥಾರೋಹಣ ನಡೆಯಿತು. ಚಿಕ್ಕ ರಥದಲ್ಲಿ ಉಮಾಮಹೇಶ್ವರ ದೇವರು ಆಸೀನರಾದರು. ಚಿಕ್ಕ ರಥೋತ್ಸವ ನೆರವೇರಿದ ಬಳಿಕ ಚಂಪಾಷಷ್ಠಿ ಮಹಾರಥೋತ್ಸವ ನಡೆಯಿತು. … Continue reading BIGG NEWS : ಕುಕ್ಕೆ ಸುಬ್ರಹ್ಮಣ್ಯದಲ್ಲಿ ‘ಷಷ್ಟಿ ಸಂಭ್ರಮ’ : ನಾಗ ದೇವರ ದರ್ಶನ ಪಡೆದು ಪುನೀತರಾದ ಭಕ್ತರು