ಶಕ್ತಿ ಯೋಜನೆ ಎಫೆಕ್ಟ್‌: ಬಿಎಂಟಿಸಿ ಬಸ್‍ನಲ್ಲಿ ಚಪ್ಪಲಿಯಲ್ಲಿ ಹೊಡೆದಾಡಿಕೊಂಡ ಮಹಿಳೆಯರು!

ಬೆಂಗಳೂರು: ಬೆಂಗಳೂರು: ಬಸ್‍ನ ಕಿಟಕಿ ವಿಚಾರಕ್ಕೆ ಇಬ್ಬರು ಮಹಿಳಾ ಪ್ರಯಾಣಿಕರ ನಡುವೆ ಜಗಳ ನಡೆದು, ಒಬ್ಬರಿಗೊಬ್ಬರು ಚಪ್ಪಲಿಯಲ್ಲಿ ಹೊಡೆದಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೆಜೆಸ್ಟಿಕ್‍ನಿಂದ ಪೀಣ್ಯಕ್ಕೆ ಹೊರಟಿದ್ದ ಕೆಎ 57 ಎಫ್ 4255 ನಂಬರ್‌ನ ಬಿಎಂಟಿಸಿ ಬಸ್‍ನಲ್ಲಿ ಮುಂದಿನ ಸೀಟ್‍ನಲ್ಲಿ ಕುಳಿತಿದ್ದ ಮಹಿಳೆ ಹಾಗೂ ಹಿಂದಿನ ಸೀಟ್‍ನಲ್ಲಿ ಕುಳಿತ ಮಹಿಳೆಯ ನಡುವೆ ಬಸ್‍ನ ಕಿಟಕಿ ವಿಚಾರಕ್ಕೆ ಗಲಾಟೆ ನಡೆದಿದೆ. ಈ ಗಲಾಟೆಯ ವೀಡಿಯೋ ಬಸ್‍ನಲ್ಲಿದ್ದ ಸಹ ಪ್ರಯಾಣಿಕರ ಮೊಬೈಲ್‍ನಲ್ಲಿ ಸೆರೆಯಾಗಿದೆ.