ಬೀದರ್ : ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಪ್ರಮುಖವಾದ 5 ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡಿತ್ತು. ಅದರಲ್ಲಿ ಮಹಿಳೆಯರಿಗಾಗಿ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕಾಗಿ ಶಕ್ತಿ ಯೋಜನೆ ಕೂಡ ಒಂದು. ಇದೀಗ ಬೀದರ್ ಅಲ್ಲಿ ಬಸ್ ಸೀಟಿಗಾಗಿ ಮಹಿಳೆಯರು ಕಿತ್ತಾಡಿಕೊಂಡಿರುವ ಘಟನೆ ನಡೆದಿದೆ.
ಸೀಟಿಗಾಗಿ ಇಬ್ಬರು ಮಹಿಳೆಯರು ಕಿತ್ತಾಡಿಕೊಂಡಿದ್ದಾರೆ. ಬೀದರ್ ಇಂದ ಕಲಬುರಗಿಗೆ ಆಗಮಿಸಲು ಉಚಿತ ಯೋಜನೆಯಡಿಯಲ್ಲಿ ಟಿಕೇಟ್ ಪಡೆದುಕೊಂಡಿದ್ದಾರೆ. ಈ ವೇಳೆ ಮಹಿಳೆಯೊಬ್ಬರು ಇದು ನನ್ನ ಜಾಗ ಬಿಡು ಎಂದಿದ್ದಾರೆ. ಅದಕ್ಕೆ ಇನ್ನೊಬ್ಬ ಮಹಿಳೆ ನಾನು ಸೀಟ್ ಬಿಡಲ್ಲ ಏನೂ ಮಾಡ್ತಿಯಾ ಎಂದು ಪರಸ್ಪರ ಇಬ್ಬರ ನಡುವೆ ವಾಗ್ವಾದ ನಡೆದಿದೆ.
ನಂತರ ಇಬ್ಬರ ಗಲಾಟೆ ತಾರಕಕ್ಕೆ ಏರಿದೆ.ಗಲಾಟೆ ಜೋರಾಗುತ್ತಿದ್ದಂತೆ ಓರ್ವ ಮಹಿಳೆ ತನ್ನ ಚಪ್ಪಲಿ ತೆಗೆದು ಜಗಳ ಮಾಡುತ್ತಿದ್ದ ಮಹಿಳೆ ಹೊಡೆದಿದ್ದಾಳೆ.ಚಪ್ಪಲಿ ಹಲ್ಲೆ ಬಳಿಕ ಮೈಮೇಲೆ ಹಾಕಿದ ಬಟ್ಟೆ ಹಿಡಿದು ಮಹಿಳೆಯರು ಎಳೆದಾಡಿಕೊಂಡಿದ್ದಾರೆ. ಇದೀಗ ಈ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.