ಬೆಂಗಳೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 136 ಸ್ಥಾನಗಳನ್ನು ಪಡೆಯದು ನುಡಿದಂತೆ ಐದು ಪ್ರಮುಖ ಗ್ಯಾರಂಟಿಗಳನ್ನು ಜಾರಿಗೊಳಿಸಿತು ಅದರಲ್ಲಿ ಪ್ರಮುಖವಾದದ್ದು ಮಹಿಳೆಯರ ಉಚಿತ ಪ್ರಯಾಣ ಶಕ್ತಿ ಯೋಜನೆ ಕೂಡ ಒಂದಾಗಿದೆ. ಇದೀಗ ಈ ಒಂದು ಯೋಜನೆಯಿಂದ ಜಿಎಸ್‌ಟಿ ಸಂಗ್ರಹ ಸೇರಿದಂತೆ ಔದ್ಯೋಗಿಕ ಕ್ಷೇತ್ರದಲ್ಲಿ ಮಹಿಳೆಯರ ಪಾಲುದಾರಿಕೆ ಹೆಚ್ಚಳವಾಗಿದೆ ಎಂದು ಸಾರಿಗೆ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಈ ಕುರಿತಂತೆ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವ ರಾಮಲಿಂಗ ರೆಡ್ಡಿ, ಶಕ್ತಿ ಯೋಜನೆಯಿಂದ ಜಿಎಸ್‌ಟಿ ಸಂಗ್ರಹ ಹೆಚ್ಚಿದ್ದು, ಔದ್ಯೋಗಿಕ ಕ್ಷೇತ್ರದಲ್ಲಿ ಶೇ 25.1ನಿಂದ 30.2ರಷ್ಟು ಮಹಿಳೆಯ ಪಾಲುದಾರಿಕೆ ಹೊಂದಿದೆ. ಇದು ಬಿಟ್ಟಿ ಭಾಗ್ಯವಲ್ಲ ಸಮಾಜದಲ್ಲಿ ಸರ್ಕಾರ ಹೂಡಿರುವ ಬಂಡವಾಳ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಟ್ವೀಟ್ ಮಾಡಿದ್ದಾರೆ. ಆ ಮೂಲಕ ಶಕ್ತಿ ಉಚಿತ ಯೋಜನೆ ಎಂದು ಮೂಗು ಮುರಿಯುವ ಬಿಜೆಪಿಗೆ ಟಾಂಗ್ ನೀಡಿದ್ದಾರೆ.
ಕರ್ನಾಟಕ ಕಾಂಗ್ರೆಸ್ ನಮ್ಮ ನಾಗರಿಕರ ಕಲ್ಯಾಣವನ್ನು ಹೆಚ್ಚಿಸಲು ಬದ್ಧವಾಗಿದೆ. ಅದರಲ್ಲೂ ವಿಶೇಷವಾಗಿ ತಮ್ಮ ಕುಟುಂಬಗಳನ್ನು ಕಾಳಜಿ ವಹಿಸುವ ಆರ್ಥಿಕ ಸಬಲೀಕರಣಕ್ಕೆ ಅರ್ಹರಾಗಿರುವ ಕಠಿಣ ಪರಿಶ್ರಮಿ ಮಹಿಳೆಯರಿಗೆ. ಶಕ್ತಿ ಯೋಜನೆ; ಸಬಲೀಕರಣಗೊಂಡ ಮಹಿಳೆಯರ ಪಯಣ ಎಂದು ಬರೆದುಕೊಂಡಿದ್ದಾರೆ.
ಶಕ್ತಿ ಯೋಜನೆ ಜಾರಿ ಬಳಿಕ ಸದ್ಬಳಕೆ ಮಾಡಿಕೊಳ್ಳುತ್ತಿದ್ದ ಮಹಿಳೆಯರು ಫ್ರೀ ಸವಾರಿಯನ್ನು ಮತ್ತಷ್ಟು ಜೋರು ಮಾಡಿದ್ದರು. ಯೋಜನೆ ಆರಂಭವಾದ 18ನೇ ದಿನಕ್ಕೆ ಒಟ್ಟು 8 ಕೋಟಿಗೂ ಹೆಚ್ಚು ಮಹಿಳೆಯರು ಫ್ರೀಯಾಗಿ ಬಸ್ನಲ್ಲಿ ಸಂಚಾರ ಮಾಡಿದ್ದರು. 2024ರ ಏಪ್ರಿಲ್ ಅಂತ್ಯದವರೆಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಬಸ್ನಲ್ಲಿ ಬರೊಬ್ಬರಿ 200 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ.
ಶಕ್ತಿ ಉಚಿತ ಯೋಜನೆ ಎಂದು ಮೂಗು ಮುರಿಯುವವರ ಗಮನಕ್ಕೆ!#ಶಕ್ತಿಯೋಜನೆ #RamalingaReddy #ShaktiScheme #Karnataka #KSRTC #BMTC #KKRTC #NWKRTC pic.twitter.com/oKTC2d01lI
— Ramalinga Reddy (@RLR_BTM) May 29, 2024
Prime Minister @narendramodi 's recent remarks on the Shakti scheme are unscientific and baseless .
Shakti scheme, a flagship programme of Govt.of Karnataka towards empowering women offering free bus travel, has proved to be a role model for other states to emulate given its… pic.twitter.com/ob82ydp2ZS
— Ramalinga Reddy (@RLR_BTM) May 29, 2024