ಬೆಂಗಳೂರು: ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನು ಮತ ಪಡೆಯೋದಕ್ಕಾಗಿ ನೀಡಿಲ್ಲ. ಲೋಕಸಭಾ ಚುನಾವಣೆಯವರೆಗೆ ಅಂತ ನಿಗದಿ ಮಾಡಿಲ್ಲ. ಯಾವುದೇ ಕಾರಣಕ್ಕೂ ಶಕ್ತಿ ಯೋಜನೆಯನ್ನು ನಿಲ್ಲಿಸುವುದಿಲ್ಲ ಅಂತ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟ ಪಡಿಸಿದ್ದಾರೆ.
ಇಂದು ಕಾಂಗ್ರೆಸ್ ನಾಯಕ ಲಕ್ಷ್ಮಣ್ ಅವರು ಗ್ಯಾರಂಟಿ ಯೋಜನೆ ನಿಲ್ಲಿಸಬೇಕು ಎನ್ನುತ್ತಿದ್ದಾರೆ. ಈ ಬಗ್ಗೆ ನೀವು ಏನು ಹೇಳುತ್ತೀರಿ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಮೋದಿ ಸರ್ಕಾರ ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದರು. ಅವರಿಗೆ ಸಹಾಯ ಮಾಡೋದಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿತ್ತು. ಇದರಿಂದ ಬಡ, ಮಧ್ಯಮ ವರ್ಗದವರಿಗೆ ಸಹಾಯ ಆಗಿದೆ ಎಂದರು.
ಗ್ಯಾರಂಟಿ ಯೋಜನೆಗೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿಲ್ಲ ಎನ್ನುವುದಕ್ಕೂ ಸಂಬಂಧವಿಲ್ಲ. ಗ್ಯಾರಂಟಿಗಳನ್ನು ಮತ ಪಡೆಯಲು ನಾವು ನೀಡಿಲ್ಲ. ಯಾವುದೇ ಕಾರಣಕ್ಕೂ ಶಕ್ತಿ ಯೋಜನೆ ನಿಲ್ಲಲ್ಲ ಅಂತ ತಿಳಿಸಿದರು.
ಸಿಎಂ ಸಿದ್ಧರಾಮಯ್ಯ ಅವರು ಶಕ್ತಿ ಯೋಜನೆಗಾಗಿ ಬಜೆಟ್ ನಲ್ಲಿ 5,500 ಕೋಟಿ ಮೀಸಲಿಟ್ಟಿದ್ದಾರೆ. ಶಕ್ತಿ ಯೋಜನೆಗೆ ಯಾವುದೇ ಸಮಸ್ಯೆ ಇಲ್ಲ. ನಮ್ಮ ಕಾಂಗ್ರೆಸ್ ಸರ್ಕಾರ ಇರುವವರೆಗೂ ಶಕ್ತಿ ಯೋಜನೆ ಇರುತ್ತೆ. ಯಾರಿಗೂ ಅನುಮಾನ ಬೇಡ. ಮುಂದೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೇ ಆಗಲೂ ಶಕ್ತಿ ಯೋಜನೆ ಇರುತ್ತದೆ ಎಂದರು.
BIG NEWS: ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ: ತೆಲಂಗಾಣ ಸಿಎಂ ರೇವಂತ ರೆಡ್ಡಿಗೆ ‘ಕನ್ನಡಿಗರ ಪತ್ರ’
ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಕೇಸ್ : ಸತತ 4 ಗಂಟೆಯ ಬಳಿಕ ಸ್ಥಳ ಮಹಜರು ನಡೆಸಿ ತೆರಳಿದ ‘SIT’