ಬೆಂಗಳೂರು; ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ(94) ಅವರು ಇಂದು ಸಂಜೆ 6.20ಕ್ಕೆ ಬಹು ಅಂಗಾಂಗ ವೈಫಲ್ಯದಿಂದ ನಿಧನರಾಗಿರುವುದಾಗಿ ಸ್ಪರ್ಶ್ ಆಸ್ಪತ್ರೆಯು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆ ನೀಡಿದ್ದು, ಅಕ್ಟೋಬರ್.23ರಂದು ಶಾಮನೂರು ಶಿವಶಂಕರಪ್ಪ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಶಾಮನೂರು ಶಿವಶಂಕರಪ್ಪ ಅವರು ಬಹು ಅಂಗಾಂಗ ವೈಫಲ್ಯದಿಂದ ಸಂಜೆ 6.20ಕ್ಕೆ ನಿಧನರಾಗಿರುವುದಾಗಿ ತಿಳಿಸಿದೆ.
ಬೆಂಗಳೂರಿನ ಇನ್ಫೆಂಟ್ರಿ ರಸ್ತೆಯಲ್ಲಿರುವಂತ ಸ್ಪರ್ಶ್ ಆಸ್ಪತ್ರೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಕಳೆದ ಒಂದು ತಿಂಗಳಿನಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.
BREAKING: ನಾಳೆ ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಪಾರ್ಥೀವ ಶರೀರ ಅಂತ್ಯಕ್ರಿಯೆ
‘ಡಿಜಿಟಲ್ ಅರೆಸ್ಟ್’ ವಂಚನೆ: 1 ಕೋಟಿ ರೂ. ಕಳೆದುಕೊಂಡ 82 ವರ್ಷದ ವ್ಯಕ್ತಿ | Digital arrest scam







