ದಾವಣಗೆರೆ: ಕರ್ನಾಟಕದ ಮ್ಯಾಂಚೆಸ್ಟರ್ ಎಂದೇ ಖ್ಯಾತವಾಗಿದ್ದ ದಾವಣಗೆರೆಯನ್ನು ವಿದ್ಯಾನಗರಿಯಾಗಿ ಪರಿವರ್ತಿಸಿದ ಶಾಮನೂರು ಶಿವಶಂಕಪ್ಪ ಅವರು ರಾಜ್ಯದ ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿದಿದ್ದಾರೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.
ಶಾಮನೂರು ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರಾಗಿ, ಸಚಿವರಾಗಿ, ಸಂಸದರಾಗಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ದಶಕಕ್ಕೂ ಹೆಚ್ಚುಕಾಲ ಅವರು ಸಲ್ಲಿಸಿರುವ ಸೇವೆ ಅನುಪಮವಾದ್ದು ಎಂದರು.
ಸಭಾದ ನಿಕಟಪೂರ್ವ ಅಧ್ಯಕ್ಷರಾಗಿದ್ದ ತಮ್ಮ ತಂದೆ ಶತಾಯುಷಿ ಭೀಮಣ್ಣ ಖಂಡ್ರೆ ಅವರೊಂದಿಗೆ ಆತ್ಮೀಯ ಬಾಂಧವ್ಯ ಹೊಂದಿದ್ದ ಶಾಮನೂರು ಅವರು ತಮಗೂ ಮಾರ್ಗದರ್ಶಕರಾಗಿದ್ದರು ಎಂದು ತಿಳಿಸಿದರು.
ದಾವಣಗೆರೆ ತಾಲೂಕನ್ನು ಜಿಲ್ಲೆಯಾಗಿ ಮಾಡುವಲ್ಲಿ ಅವರ ಕೊಡುಗೆ ಅಪಾರವಾಗಿದೆ, ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಅವರು ಶ್ರಮಿಸಿದ್ದರು. ನೇರ ನಿಷ್ಟುರ ವಾದಿಯಾಗಿದ್ದ ಅವರ ಆಗಲಿಕೆಯಿಂದ ರಾಷ್ಟ್ರ ಒಬ್ಬ ಮುತ್ಸದ್ದಿ ರಾಜಕಾರಣಿಯನ್ನು ಕಳೆದುಕೊಂಡಿದೆ ಎಂದು ಈಶ್ವರ ಖಂಡ್ರೆ ಶೋಕ ವ್ಯಕ್ತಪಡಿಸಿದರು.
BIG NEWS: ರಾಜ್ಯದ 84 ತಾಲ್ಲೂಕುಗಳಿಗೆ ‘ತಾಲ್ಲೂಕು ವೈದ್ಯಾಧಿಕಾರಿ’ ನೇಮಿಸಿ ಸರ್ಕಾರ ಆದೇಶ: ಇಲ್ಲಿದೆ ಪಟ್ಟಿ








