ಕೆಎನ್ಎನ್ಡಿಜಿಟಲ್ ಡೆಸ್ಕ್ : ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಬ್ ಪಂತ್ ಕಾರು ಇಂದು ಬೆಳಿಗ್ಗೆ ರಸ್ತೆ ಅಪಘಾತವಾಗಿದ್ದು, ತೀವ್ರವಾಗಿ ಗಾಯಗೊಂಡಿದ್ದಾರೆ. ಪಂತ್ ತಮ್ಮ ಬಿಎಂಡಬ್ಲ್ಯು ಕಾರಿನಲ್ಲಿ ದೆಹಲಿಯಿಂದ ರೂರ್ಕಿಯಲ್ಲಿರುವ ತಮ್ಮ ಮನೆಗೆ ಹೋಗುವಾಗ ರೂರ್ಕಿ ಬಳಿಯ ಹೆದ್ದಾರಿಯಲ್ಲಿ ಅವರ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಜಖಂಗೊಂಡಿದೆ. ಡಿಕ್ಕಿಯ ರಭಸಕ್ಕೆ ಕಾರು ಹಾರಿಹೋಗಿ ನಂತ್ರ ಬೆಂಕಿ ಹೊತ್ತಿಕೊಂಡಿದೆ.
ಸಮಯಕ್ಕೆ ಸರಿಯಾಗಿ ರಿಷಬ್ ಪಂತ್ ಕಾರಿನಿಂದ ಹೊರ ಬಂದಿದ್ದು ನಿಜಕ್ಕೂ ಸಮಾಧಾನಕರ ಸಂಗತಿ. ಆದ್ರೆ, ಈ ಸಮಯದಲ್ಲಿ ಅವರು ಗಂಭೀರ ಗಾಯಗೊಂಡಿದ್ದಾರೆ. ಆದ್ರೆ, ಅಂತಹ ಪರಿಸ್ಥಿತಿಯಲ್ಲಿ ಅಲ್ಲಿದ್ದ ಕೆಲವರು ಪಂತ್ಗೆ ಸಹಾಯ ಮಾಡುವ ಬದಲು ಅವರ ಕಾರಿನಿಂದ ಹಣ, ಚಿನ್ನವನ್ನ ಕದ್ದು ಪರಾರಿಯಾಗಿದ್ದಾರೆ ಎಂದು ಕೆಲವು ಮಾಧ್ಯಮ ವರದಿಗಳು ಹೇಳುತ್ತವೆ.
ಅಪಘಾತದ ಸ್ಥಳದಲ್ಲಿ ಸಾಕಷ್ಟು ಹಣ ಬಿದ್ದಿರುವುದು ಕಂಡುಬಂದಿದೆ ಎಂದು ಈ ವರದಿಗಳಲ್ಲಿ ಹೇಳಲಾಗುತ್ತಿದೆ. ಈ ಅಪಘಾತದಿಂದಾಗಿ ಪಂತ್ ಅವರ ಹಣೆ, ಮೊಣಕಾಲು ಮತ್ತು ಮೊಣಕಾಲಿನ ಕೆಳಗೆ ಅನೇಕ ಗಾಯಗಳಾಗಿವೆ. ಇದಲ್ಲದೆ, ಅವರ ಬೆನ್ನಿನ ಮೇಲೆ ಗೀರುಗಳ ಗುರುತುಗಳು ಕಂಡುಬಂದಿವೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ತಕ್ಷಣ ಆಂಬ್ಯುಲೆನ್ಸ್ಗೆ ಕರೆ ಮಾಡಿ ಅವರನ್ನ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇಲ್ಲಿ ವೈದ್ಯರು ಪ್ರಥಮ ಚಿಕಿತ್ಸೆಯ ನಂತ್ರ ಡೆಹ್ರಾಡೂನ್ನ ಮ್ಯಾಕ್ಸ್ ಆಸ್ಪತ್ರೆಗೆ ಕಳುಹಿಸಿದ್ದಾರೆ. ಪಂತ್ ಅವರ ಚಿಕಿತ್ಸೆಗಾಗಿ ಪ್ಲಾಸ್ಟಿಕ್ ಸರ್ಜರಿ ಕೂಡ ಮಾಡಬೇಕಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಅಪಘಾತದ ಹಲವು ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದು, ಸ್ಥಳೀಯ ಪೊಲೀಸರ ಸಹಾಯದಿಂದ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಪಂತ್ ಅಪಘಾತದ ಬಗ್ಗೆ ಮಾಹಿತಿ ಪಡೆದ ನಂತರ, ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಕೂಡ ತಕ್ಷಣ ಅಧಿಕಾರಿಗಳೊಂದಿಗೆ ಮಾತನಾಡಿ ಅವರ ಸ್ಥಿತಿಯ ಬಗ್ಗೆ ವಿಚಾರಿಸಿದರು. ಇದಲ್ಲದೇ ಪಂತ್ ಅವರ ಚಿಕಿತ್ಸೆಗೆ ಅಗತ್ಯವಿರುವ ಪ್ರತಿಯೊಂದು ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದು, ರಾಜ್ಯ ಸರ್ಕಾರದ ವೆಚ್ಚದಲ್ಲಿ ಚಿಕಿತ್ಸೆ ನೀಡಲಾಗುವುದು.
ಅಂದ್ಹಾಗೆ, ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯನ್ನ ಆಡಿದ ನಂತ್ರ ಪಂತ್ ಇತ್ತೀಚೆಗೆ ಭಾರತಕ್ಕೆ ಮರಳಿದರು. ಮುಂಬರುವ ಶ್ರೀಲಂಕಾ ವಿರುದ್ಧದ T20 ಮತ್ತು ODI ಸರಣಿಯ ಭಾಗವಾಗಿರಲಿಲ್ಲ. ಆದ್ರೆ, ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಯೋಜನೆಗಳ ಭಾಗವಾಗಿದ್ದರು. ಈಗ ಈ ಗಾಯದ ನಂತ್ರ ಅವರು ಮೈದಾನಕ್ಕೆ ಮರಳಲು ಎಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂಬುದು ತಿಳಿಯಬೇಕಿದೆ.
BIGG NEWS : ‘2023 ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ’ : ಸಿಎಂ ಬೊಮ್ಮಾಯಿ
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ಶಿಷ್ಯ ವೇತನಕ್ಕೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನಾಂಕ