ಕಲಬುರಗಿ : ಪ್ರಿಯಾಂಕ್ ಖರ್ಗೆ ಅವರನ್ನು ಎಕೆ 47 ಗನ್ ನಿಂದ ಶೂಟ್ ಮಾಡುತ್ತೇನೆ ಎಂದು ಬಿಜೆಪಿ ಸರ್ಕಾರ ತಮ್ಮ ಕಾರ್ಯಕರ್ತನ ಮೂಲಕ ಹೇಳಿಕೆ ಕೊಡಿಸಿದೆ , ಈ ಮೂಲಕ ಪ್ರಿಯಾಂಕ್ ಖರ್ಗೆಯನ್ನು ಮುಗಿಸುವ ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಶರಣಪ್ರಕಾಶ ಪಾಟೀಲ್ ಬಿಜೆಪಿ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.
ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಚಿವರು ‘ ಪ್ರಿಯಾಂಕ್ ಖರ್ಗೆ ಅವರನ್ನು ಎಕೆ 47 ಗನ್ ನಿಂದ ಶೂಟ್ ಮಾಡುತ್ತೇನೆ ಎಂದು ಬಿಜೆಪಿ ಸರ್ಕಾರ ತಮ್ಮ ಕಾರ್ಯಕರ್ತನ ಮೂಲಕ ಹೇಳಿಕೆ ಕೊಡಿಸಿದೆ, ಸಮ್ಮಿಶ್ರ ಸರ್ಕಾರದಲ್ಲಿದ್ದಾಗ ಪ್ರಿಯಾಂಕ್ ಖರ್ಗೆ ಅವರಿಗೆ ಭದ್ರತೆ ನೀಡಲಾಗಿತ್ತು, ಬಿಜೆಪಿ ಸರ್ಕಾರ ಬಂದ ಮೇಲೆ ಆ ಭದ್ರತೆ ವಾಪಸ್ ಪಡೆಯಲಾಗಿದೆ. ಈ ಮೂಲಕ ಪಿಎಸ್ಐ ಹಗರಣದ ಸೇಡು ತೀರಿಸಿಕೊಳ್ಳಲು ಬಿಜೆಪಿ ಸಂಚು ರೂಪಿಸುತ್ತಿದೆ ಎಂದು ಕಿಡಿಕಾರಿದರು.
ಪ್ರಿಯಾಂಕ್ ಖರ್ಗೆ ಸರ್ಕಾರದ ಅವ್ಯವಹಾರ ಅಕ್ರಮದ ಕುರಿತು ಧ್ವನಿ ಎತ್ತುತ್ತಿದ್ದಾರೆ. ಹೀಗಾಗಿ ಸರ್ಕಾರ ಪ್ರಿಯಾಂಕ್ ಖರ್ಗೆ ಅವರ ಧ್ವನಿ ಹಾಗೂ ಅವರನ್ನು ಸಹ ಮುಗಿಸುವ ಸಂಚು ಹೆಣೆಯುತ್ತಿದೆ ಎಂದು ದೂರಿದ್ದಾರೆ.
ಬಿಜೆಪಿಯವರಿಗೆ ಸಂಸ್ಕಾರ ಇಲ್ಲ , ಯಾರನ್ನು ಹೇಗೆ ಕರೆಯಬೇಕು ಗೊತ್ತಿಲ್ಲ : ಡಿ.ಕೆ ಶಿವಕುಮಾರ್ ವಾಗ್ಧಾಳಿ