ಕೊಡಗು: ಜಿಲ್ಲೆಯ ತಡಿಯಾಂಡಮೋಳ್ ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ನಾಪತ್ತೆಯಾಗಿದ್ದಳು. ಆಕೆಯ ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದರು. ಹೀಗಾಗಿ ಇಂದು ಹೆಚ್ಚುವರಿಯಾಗಿ 40 ಸಿಬ್ಬಂದಿಯ 4 ತಂಡ ನಿಯೋಜಿಸಲು ಹಾಗೂ ಡ್ರೋನ್ ಕ್ಯಾಮರಾ ಬಳಸುವಂತೆ ತಿಳಿಸಲಾಗಿದ್ದು, ಒಟ್ಟು 9 ತಂಡದಿಂದ ಶರಣ್ಯ ಪತ್ತೆ ಕಾರ್ಯಾಚರಣೆಗೆ ಇಳಿಯಲಾಗಿತ್ತು. ಅಂತಿಮವಾಗಿ ನಾಪತ್ತೆಯಾಗಿದ್ದಂತ ಶರಣ್ಯ ಪತ್ತೆಯಾಗಿರುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಚಾರಣಕ್ಕಾಗಿ ಕೇರಳದಿಂದ ಒಬ್ಬರೇ ಆಗಮಿಸಿ, ಕಕ್ಕಬ್ಬೆ ಗ್ರಾಮದಲ್ಲಿ ಖಾಸಗಿ ಹೋಂಸ್ಟೇಯಲ್ಲಿ ತಂಗಿದ್ದ ಶರಣ್ಯ ಅವರು ಗೈಡ್ ಹಾಗೂ ಇನ್ನಿತರ 15 ಚಾರಣಿಗರೊಂದಿಗೆ ಕಳೆದ ಗುರುವಾರ (ಏ.2) ಕೊಡಗಿನ ಎತ್ತರದ ಗಿರಿಶ್ರೇಣಿ ತಡಿಯಂಡಮೋಳ್ ಬೆಟ್ಟಕ್ಕೆ ತೆರಳಿದ್ದರು. ಅಂದು ಮಧ್ಯಾಹ್ನ ಆಕೆ ಕಾಣೆಯಾಗಿದ್ದು, ವಿಷಯ ತಿಳಿದ ಕೂಡಲೇ ಪೊಲೀಸರು, ನಕ್ಸಲ್ ನಿಗ್ರಹದಳ, ಶ್ವಾನದಳ ಮತ್ತು ಅರಣ್ಯ ಸಿಬ್ಬಂದಿ ಸೇರಿ 50 ಜನರ ಐದು ತಂಡಗಳು ಶೋಧ ನಡೆಸಲಾಗಿತ್ತು ಎಂದು ಅವರು ತಿಳಿಸಿದ್ದಾರೆ.
ಗುರುವಾರ ಕೊನೆಯದಾಗಿ ದೂರವಾಣಿ ಮೂಲಕ ಹೋಂಸ್ಟೇ ಸಂಪರ್ಕಿಸಿರುವ ಯುವತಿ, ತಾವು ದಾರಿತಪ್ಪಿದ್ದಾಗಿ ತಿಳಿಸಿದ್ದಾರೆ ಎಂಬ ಮಾಹಿತಿ ಇದೆ. ಅವರ ಫೊನ್ ಲೊಕೇಷನ್ ಆಧರಿಸಿ ಶೋಧ ನಡೆಸಲಾಗಿತ್ತು. ಸ್ಥಳೀಯ ಬುಡಕಟ್ಟು ಜನರೂ ನೆರವಿಗೆ ಧಾವಿಸಿದ್ದು, ಅತ್ಯಾಧುನಿಕ ಥರ್ಮಲ್ ಡ್ರೋನ್ ಕ್ಯಾಮರಾಗಳ ನೆರವೂ ಪಡೆಯಲಾಗಿತ್ತು. ಇಂದಿನಿಂದ ಹೆಚ್ಚುವರಿ ತಂಡ ನಿಯೋಜಿಸಲಾಗಿತ್ತು. ಇದೀಗ ಶೋಧ ಕಾರ್ಯಾಚರಣೆಯ ಬಳಿಕ ಕೊಡಗಿನ ತಡಿಯಾಂಡಮೋಳ್ ಗೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದಂತ ಕೇರಳ ಮೂಲದ ಶರಣ್ಯ ಪತ್ತೆಯಾಗಿರುವುದಾಗಿ ಸಚಿವ ಈಶ್ವರ ಖಂಡ್ರೆ ಮಾಹಿತಿ ನೀಡಿದ್ದಾರೆ.
ತಡಿಯಾಂಡಮೋಳ್ ಬೆಟ್ಟದಲ್ಲಿ ಯುವತಿ ಕಣ್ಮರೆ: 40 ಸಿಬ್ಬಂದಿಯ ಹೆಚ್ಚುವರಿ ತಂಡ, ಡ್ರೋನ್ ಶೋಧ- ಸಚಿವ ಈಶ್ವರ ಖಂಡ್ರೆ
ಹಾರ್ಮುಜ್ ಜಲಸಂಧಿ ತೆರೆಯಿರಿ ಇಲ್ಲವೇ ನರಕ ಅನುಭವಿಸ್ತೀರಿ: ಇರಾನ್ ಗೆ ಅಮೆರಿಕ ಅಧ್ಯಕ್ಷ ಟ್ರಂಪ್ ಖಡಕ್ ವಾರ್ನಿಂಗ್!








