ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಬೆಂಡಿಗಾನಹಳ್ಳಿ ಗ್ರಾಮದಲ್ಲಿ ದೇವಾಲಯಕ್ಕೆ ಸಚಿವರ ಪುತ್ರ ಹೋಗ್ತಾನೆ ಎಂದು ಶಾಸಕ ಶರತ್ ಬಚ್ಚೇಗೌಡ ಬೆಂಬಲಿಗರು ದೇವಸ್ಥಾನಕ್ಕೆ ಬೀಗ ಹಾಕಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.
BIGG NEWS: ಬೆಂಗಳೂರಿನಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಟೆಕ್ಕಿ ಆತ್ಮಹತ್ಯೆಗೆ ಶರಣು
ಇದರಿಂದಾಗಿ ಶಾಸಕ ಮತ್ತು ಸಚಿವರ ಬೆಂಬಲಿಗರ ನಡುವೆ ಮಾರಾಮಾರಿ ಶುರುವಾಗಿದೆ. ಶಾಸಕ ಶರತ್ ಬಚ್ಚೇಗೌಡ ತವರೂರಾದ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಬೆಂಡಿಗಾನಹಳ್ಳಿ ಗ್ರಾಮದ ಬಸವೇಶ್ವರ ದೇವಸ್ಥಾನಕ್ಕೆ ಸಚಿವ ಎಂಟಿಬಿ ನಾಗರಾಜ್ ಪುತ್ರ ರಾಜೇಶ್ ಭೇಟಿ ನೀಡುವುದಾಗಿ ತಿಳಿಸಿದ್ರಂತೆ. ಆದ್ರೆ ಈ ವೇಳೆ ಸಚಿವರ ಪುತ್ರ ಗ್ರಾಮಕ್ಕೆ ಆಗಮಿಸುತ್ತಿದ್ದಾರೆ ಅಂತ ತಿಳಿದು ದೇವಸ್ಥಾನಕ್ಕೆ ಬೀಗ ಹಾಕಿಸಿದ್ದಾರೆ ಎಂದು ಎಂಟಿಬಿ ನಾಗರಾಜ್ ಬೆಂಬಲಿಗರು ಆಕ್ರೋಶ ಹೊರಹಾಕಿದ್ದಾರೆ.