ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ನಿರ್ಮಾಣ ಮಾಡಲು ಹೊರಟಿರುವಂತ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಕುರಿತಂತೆ ಸಂವಾದಕ್ಕಾಗಿ ಮಾಧ್ಯಮದವರನ್ನು ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ಆಹ್ವಾನಿಸಿದೆ. ಅಕ್ಟೋಬರ್.27ರಂದು ಶಿವಮೊಗ್ಗದ ವಾರ್ತಾಭವನದಲ್ಲಿ ಮಾಧ್ಯಮದವರೊಂದಿಗೆ ಈ ಸಂವಾದವನ್ನು ನಿಗದಿ ಪಡಿಸಲಾಗಿದೆ.
ಈ ಕುರಿತಂತೆ ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ ಮುಖ್ಯ ಅಭಿಯಂತರರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರಿ ಸ್ವಾಮ್ಯದ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಶಪಿಸಿಎಲ್) ವತಿಯಿಂದ 2000 ಮೆಗಾವಾಟ್ ಸಾಮರ್ಥ್ಯದ ಶರಾವತಿ ಪಂಪ್ ಸ್ಟೋರೇಜ್ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ, ಯೋಜನೆಯ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ವಿಸ್ತ್ರತ ಮಾಹಿತಿ ನೀಡಲು ಕೆಪಿಸಿಎಲ್ ಮುಂದಾಗಿದೆ ಎಂದಿದ್ದಾರೆ.
ಈ ಯೋಜನೆಯು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿದೆ. ಆದರೆ, ಯೋಜನೆಯ ಕುರಿತು ಕೆಲವು ತಪ್ಪು ಪ್ರಚಾರಗಳು ಹಾಗೂ ಸತ್ಯಕ್ಕೆ ದೂರವಾದ ಮಾಹಿತಿಗಳನ್ನು ಹರಡುತಹತಿದ್ದು, ಜನರಲ್ಲಿ ಗೊಂದಲ ಉಂಟಾಗುತ್ತಿದೆ. ಹೀಗಾಗಿ, ಯೋಜನೆಯ ನೈಜಾಂಶಗಳನ್ನು ಸ್ಪಷ್ಟಪಡಿಸುವುದರ ಜತೆಗೆ, ಜನಜೀವನ, ಪರಿಸರದ ಮತ್ತು ವನ್ಯಜೀವಿಗಳ ಮೇಲೆ ಯಾವುದೇ ವ್ಯತಿರಿಕ್ತ ಪರಿಣಾಮ ಬೀರದಂತೆ ಯೋಜನೆಯನ್ನು ಅನುಷ್ಠಾನಗೊಳಿಸುವುದರ ಕುರಿತು ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ತಿಳಿಸುವುದು ಸರ್ಕಾರಿ ಸ್ವಾಮ್ಯದ ಸಂಸ್ಥೆಯಾಗಿರುವ ಕೆಪಿಸಿಎಲ್ ನ ಜವಾಬ್ದಾರಿಯಾಗಿದೆ ಎಂದು ತಿಳಿಸಿದ್ದಾರೆ.
ಇಂಧನ ಸಚಿವ ಕೆಜೆ ಜಾರ್ಜ್ ಹಾಗೂ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರೂ ಕೂಡ ಈ ಮಹಾತ್ವಾಕಾಂಕ್ಷಿ ಯೋಜನೆಯ ವಾಸ್ತವಾಂಶಗಳನ್ನು ಮಾಧ್ಯಮಗಳ ಮೂಲಕ ಜನರಿಗೆ ತಿಳಿಸಲು ಕೆಪಿಸಿಎಲ್ ಗೆ ನಿರ್ದೇಶನ ನೀಡಿದ್ದಾರೆ. ಅದರಂತೆ ಮಾಧ್ಯಮ ಪ್ರತಿನಿಧಿಗಳನ್ನು ಆಹ್ವಾನಿಸಿ, ಅವರಿಗೆ ಯೋಜನೆಯ ಮಾಹಿತಿ ನೀಡಲು ನಿಗಮ ಕ್ರಮ ಕೈಗೊಂಡಿದೆ ಎಂದಿದ್ದಾರೆ.
ಈ ಹಿನ್ನೆಲೆಯಲ್ಲಿ ಜಿಲ್ಲಾ ಕೇಂದ್ರವಾದ ಶಿವಮೊಗ್ಗದಿಂದ ರಾಜ್ಯ ಮತ್ತು ಜಿಲ್ಲಾ ಮಟ್ಟದ ಪತ್ರಿಕೆಗಳು ಹಾಗೂ ವಿದ್ಯುನ್ಮಾನ ಮಾಧ್ಯಮದ ಪ್ರತಿನಿಧಿಗಳನ್ನು ದಿನಾಂಕ:27.10.2025 ರಂದು ಸಮಯ: ಬೆಳಿಗ್ಗೆ 10.30 ಕ್ಕೆ ವಾರ್ತಾಭವನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಹಾಜರಾಗಲು ಕೋರಿದ್ದಾರೆ.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದ ‘ಬಡವಾಳ ಹೂಡಿಕೆ ಆಕರ್ಷಣೆ ಸಭೆ’ಯ ಪ್ರಮುಖ ಹೈಲೈಟ್ಸ್








