ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಜೈಲುಪಾಲಾಗಿರುವ ಮುರುಘಾ ಮಠದ ಶ್ರೀಗಳಿಗೆ ಮತ್ತೊಂದು ಶಾಕ್ ಎದುರಾಗಿದೆ. ಈ ಬಾರಿ ಶರಣ ಸಂಸ್ಕೃತಿ ಉತ್ಸವವನ್ನು ಸರಳವಾಗಿ ಆಚರಿಸಲು ಉತ್ಸವ ಸಮಿತಿ ನಿರ್ಧರಿಸಿದೆ. ಆದರೆ ಉತ್ಸವ ಸಮಿತಿ ಆಹ್ವಾನ ಪತ್ರಿಕೆಯಲ್ಲಿ ಮುರುಘಾಶ್ರೀ ಹೆಸರು ಕೈಬಿಡಲಾಗಿದೆ.
ಪ್ರತಿವರ್ಷ ದಸರಾ ಸಂದರ್ಭದಲ್ಲಿ ಮುರುಘಾಮಠದಲ್ಲಿ ಅದ್ಧೂರಿಯಾಗಿ ಶರಣ ಸಂಸ್ಕೃತಿ ಉತ್ಸವ ಆಚರಿಸಲಾಗುತ್ತಿತ್ತು. ಈ ಉತ್ಸವ 9 ದಿನಗಳ ಕಾಲ ನಡೆಯುತ್ತಿತ್ತು. ಆದರೆ ಈ ವರ್ಷ ಒಂಭತ್ತು ದಿನಗಳ ಉತ್ಸವವನ್ನು ಮೂರು ದಿನಕ್ಕೆ ಸೀಮಿತಗೊಳಿಸಲಾಗಿದೆ.
ಶರಣ ಸಂಸ್ಕೃತಿ ಉತ್ಸವವು ಅ.4 ರಿಂದ 6ರವರೆಗೆ ನಡೆಯಲಿದೆ. ಅ.4ರಂದು ಬಸವತತ್ವ ಧ್ವಜಾರೋಹಣ, ಉತ್ಸವ ಉದ್ಘಾಟನೆ ನಡೆಯಲಿದೆ. ಅ.5ರಂದು ಸಾಮೂಹಿಕ ಕಲ್ಯಾಣ ಮಹೋತ್ಸವ ನಡೆಯಲಿದೆ. ಕೋಟೆಯೊಳಗಿನ ಮಠದಲ್ಲಿ ರಾಜವಂಶಸ್ಥರಿಂದ ಭಕ್ತಿ ಸಮರ್ಪಣೆ ಮಾಡಲಾಗುತ್ತದೆ. ಅ. 5ರಂದು ಮುರುಘಾ ಶಾಂತವೀರಶ್ರೀ ಭಾವಚಿತ್ರದೊಂದಿಗೆ ಪೀಠಾರೋಹಣ ನಡೆಯುತ್ತದೆ.