ಕೊರೋನಾ ನಿಭಾಯಿಸುವಲ್ಲಿ ಮೋದಿ ಸರ್ಕಾರ ವಿಫಲ : ಶಶಿ ತರೂರ್ ಕಿಡಿ – Kannada News Now


India

ಕೊರೋನಾ ನಿಭಾಯಿಸುವಲ್ಲಿ ಮೋದಿ ಸರ್ಕಾರ ವಿಫಲ : ಶಶಿ ತರೂರ್ ಕಿಡಿ

ನವದೆಹಲಿ: ಮಹಾಮಾರಿ ಕೊರೋನಾ ನಿಯಂತ್ರಿಸುವಲ್ಲಿ ಭಾರತಕ್ಕಿಂತ ಪಾಕಿಸ್ತಾನ ಉತ್ತಮ ಸಾಧನೆ ಮಾಡಿದೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಮೋದಿ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

ಕೋವಿಡ್ ನಿಭಾಯಿಸುವಲ್ಲಿ ಮೋದಿ ಸರ್ಕಾರ ವಿಫಲವಾಗಿದೆ ಎಂದು ಲಾಹೋರ್ ಸಾಹಿತ್ಯ ಉತ್ಸವದಲ್ಲಿ ಶಶಿ ತರೂರ್ ಹೇಳಿದ್ದಾರೆ. ಕೋವಿಡ್ 19 ಬಗ್ಗೆ ಈಗಲೇ ಗಂಭೀರವಾಗಿ ಯೋಚಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಆರ್ಥಿಕ ಕುಸಿತದ ಎದುರಿಸಬೇಕಾಗುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಹಿಂದೆ ಎಚ್ಚರಿಕೆ ನೀಡಿದ್ದರೂ ಮೋದಿ ಸರ್ಕಾರ ವಿಫಲವಾಗಿದೆ ಎಂದು ದೂರಿದ್ದಾರೆ.

ಮೋದಿ ಸರ್ಕಾರವು ಮುಸ್ಲಿಂ ವಿರುದ್ಧದ ಧರ್ಮಾಂಧತೆ ಸಮರ್ಥಿಸುವ ಸಲುವಾಗಿ ತಬ್ಲಿಘಿ ಜಮಾಅತ್ ಅನ್ನು ದೂಷಿಸುತ್ತಿದೆ ಎಂದು ತರೂರ್ ಆರೋಪಿಸಿದ್ದಾರೆ.
error: Content is protected !!