ಬೆಂಗಳೂರು: “ಶಿಗ್ಗಾಂವಿ ಉಪಚುನಾವಣೆ ಸಂಬಂಧ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬಂಡಾಯವಿಲ್ಲ. ಸೈಯದ್ ಅಜ್ಜಂ ಪೀರ್ ಖಾದ್ರಿ ಅವರು ನಾಮಪತ್ರ ಹಿಂಪಡೆಯಲಿದ್ದು, ಎಲ್ಲರೂ ಒಟ್ಟಾಗಿ ಪಕ್ಷದ ಪರವಾಗಿ ಚುನಾವಣೆ ಮಾಡುತ್ತಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಬಳಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ಶಿಗ್ಗಾಂವಿಯಲ್ಲಿ ಖಾದ್ರಿ ಅವರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಬಗ್ಗೆ ಕೇಳಿದಾಗ, “ನಾನು ಖಾದ್ರಿ ಅವರು ಹಾಗೂ ಅವರ ಕಾರ್ಯಕರ್ತರ ಜತೆ ಮಾತನಾಡಿದ್ದೇನೆ. ಈ ವಿಚಾರವಾಗಿ ಸಚಿವರಾದ ಜಮೀರ್ ಅಹ್ಮದ್, ರಹೀಂ ಖಾನ್, ರೆಹಮಾನ್ ಖಾನ್ ಸೇರಿದಂತೆ ಆ ಜಿಲ್ಲೆಯ ನಾಯಕರ ಜತೆ ಚರ್ಚೆ ಮಾಡಿದ್ದು, ನಾಮಪತ್ರ ಹಿಂಪಡೆದು ಒಟ್ಟಾಗಿ ಕೆಲಸ ಮಾಡಲಾಗುವುದು” ಎಂದು ತಿಳಿಸಿದರು.
ಕರ್ನಾಟಕವನ್ನು ರಾಜ್ಯ ಸರ್ಕಾರ ‘ಪಾಕಿಸ್ತಾನ’ ಮಾಡಲು ಹೊರಟಿದೆ: ಸಂಸದ ತೇಜಸ್ವಿ ಸೂರ್ಯ ವಾಗ್ಧಾಳಿ