ಬೆಂಗಳೂರು: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ಕೆಸಿಸಿಐ) ವತಿಯಿಂದ ಕೊಡಮಾಡುವ 2025ನೇ ಸಾಲಿನ ರಾಷ್ಟ್ರೀಯ ಮಟ್ಟದ ‘ಎಫ್ಕೆಸಿಸಿಐ ಇಂಡಿಯಾ ಕಾರ್ಪೋರೇಟ್ ಸಾಮಾಜಿಕ ಜವಾಬ್ದಾರಿ ಮತ್ತು ಸುಸ್ಥಿರತೆ’ ಪ್ರಶಸ್ತಿ ಶಿಲ್ಪಾ ಫೌಂಡೇಷನ್ ಲಭಿಸಿದೆ.
ಕೆ.ಜಿ.ರಸ್ತೆಯ ಸರ್. ಎಂ.ವಿ.ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಫೌಂಡೇಷನ್ ಸಂಸ್ಥಾಪಕ ಅಚ್ಚುತ್‌ಗೌಡಗೆ ಸಚಿವ ಜಿ.ಪರಮೇಶ್ವರ್ ಪ್ರಶಸ್ತಿ ಪ್ರದಾನ ಮಾಡಿದರು.
11 ವರ್ಷಗಳಿಂದ ಸಾಮಾಜಿಕ ಹೊಣೆಗಾರಿಕೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಹಿನ್ನೆಲೆಯಲ್ಲಿ ನಮ್ಮ ಸಂಸ್ಥೆಗೆ ರಾಷ್ಟ್ರೀಯ ಮಟ್ಟದ ಗೌರವ ದೊರೆತ್ತಿರುವುದು ಹೆಮ್ಮೆ ತಂದಿದೆ. ಸಿಎಸ್‌ಆರ್ ನಿಧಿ ಬಳಸಿ ಫೌಂಡೇಶನ್ ಮೂಲಕ ಉಚಿತವಾಗಿ ಸಾವಿರಾರು ಸರ್ಕಾರಿ ಶಾಲಾ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗಿದ್ದೇವೆ. ಕೆ.ಆರ್.ಸರ್ಕಲ್ ಸೇರಿ ಬೆಂಗಳೂರಿನ 3 ಸ್ಥಳಗಳಲ್ಲಿ ಲಕ್ಷಾಂತರ ರೂ.ವೆಚ್ಚದಲ್ಲಿ ‘ಸ್ಮಾರ್ಟ್ ಬಸ್ ನಿಲ್ದಾಣ’ ನಿರ್ಮಿಸಿದ್ದೇವೆ. ಹಲವು ಸಮಾಜಮುಖಿ ಕಾರ್ಯಗಳಲ್ಲಿ ಸಂಸ್ಥೆ ತೊಡಗಿಸಿಕೊಂಡಿದೆ. ಪ್ರಶಸ್ತಿ ಸಿಕ್ಕಿರುವುದರಿಂದ ಮುಂದಿನ ದಿನಗಳಲ್ಲಿ ಇನ್ನಷ್ಟು ಕೆಲಸ ಮಾಡುವುದಕ್ಕೆ ಪ್ರೇರಣೆ ಜೊತೆಗೆ ಜವಾಬ್ದಾರಿಯೂ ಹೆಚ್ಚಿದಂತಾಗಿದೆ ಎಂದು ಅಚ್ಚುತ್‌ಗೌಡ ಹರ್ಷ ವ್ಯಕ್ತಪಡಿಸಿದ್ದಾರೆ.
ಆರೋಗ್ಯ, ಶಿಕ್ಷಣ, ಕೌಶಲಾಭಿವೃದ್ಧಿ, ಮಹಿಳಾ ಅಭಿವೃದ್ಧಿ, ನೀರು, ನೈರ್ಮಲ್ಯ, ಶುಚಿತ್ವ, ಜಲ ನಿರ್ವಹಣೆ, ಕಾರ್ಪೋರೇಟ್, ಎನ್‌ಜಿಒ ಮತ್ತು ಎಂಎಸ್‌ಎಂಇ ಸೇರಿ ಇತರೆ ಕ್ಷೇತ್ರಗಳಲ್ಲಿ ಸಾಧನೆಗೈದ ಸಂಸ್ಥೆಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಎಫ್ಕೆಸಿಸಿಐ ಅಧ್ಯಕ್ಷ ಬಾಲಕೃಷ್ಣ, ಕೀರ್ತನ್‌ಗೌಡ, ಅಭಿಜಿತ್ ರಂಜನ್, ಅನಿರೀತ್ ಮತ್ತಿತರರಿದ್ದರು.
ಸೆ.13 ಹಾಗೂ 14 ರಂದು ಗಗನಚುಕ್ಕಿ ಜಲಪಾತೋತ್ಸವ: ಶಾಸಕ ಪಿ.ಎಂ.ನರೇಂದ್ರಸ್ವಾಮಿ