ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.19 ರಂದು ಒಟ್ಟು 14 ನಾಮಪತ್ರಗಳು ಸಲ್ಲಿಕೆ ಆಗಿವೆ.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್‍ಕುಮಾರ್, ಅಖಿಲ ಭಾರತ ಹಿಂದೂ ಮಹಾಸಭಾ ಪಕ್ಷದ ಅಭ್ಯರ್ಥಿ ಚಂದ್ರಶೇಖರ್ ಹೆಚ್ ಸಿ, ಪಕ್ಷೇತರ ಅಭ್ಯರ್ಥಿಗಳಾಗಿ ಕೆ.ಎಸ್.ಈಶ್ವರಪ್ಪ, ಡಿ.ಎಸ್.ಈಶ್ವರಪ್ಪ, ಪಿ.ಶ್ರೀಪತಿ, ಎಸ್.ಬಾಲಕೃಷ್ಣ ಭಟ್, ರವಿಕುಮಾರ್ ಎನ್, ಪೂಜಾ ಅಣ್ಣಯ್ಯ, ಇಂತಿಯಾಜ್ ಎ.ಅತ್ತಾರ್, ಸಂದೇಶ್ ಶೆಟ್ಟಿ ಎ, ಬಂಡಿ ರಂಗನಾಥ ವೈ.ಆರ್, ಶೇಖರಪ್ಪ ಹೆಚ್, ಹನುಮಂತಪ್ಪ, ಜಿ.ಜಯದೇವ ಸೇರಿದಂತೆ ಇಂದು ಒಟ್ಟು 14 ನಾಮಪತ್ರಗಳ ಸಲ್ಲಿಕೆಯಾಗಿದೆ.

ಒಟ್ಟು 38 ನಾಮಪತ್ರ ಸಲ್ಲಿಕೆ : ಏ.12 ರಿಂದ 19 ರವರೆಗೆ ಒಟ್ಟು 27 ಅಭ್ಯರ್ಥಿಗಳಿಂದ 38 ನಾಮಪತ್ರಗಳ ಸಲ್ಲಿಕೆಯಾಗಿದೆ. ಏ.20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏ.22 ರಂದು ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದ್ದು ಮೇ 7 ರಂದು ಮತದಾನ ನಡೆಯಲಿದೆ.

ಹೆಣದ ಮೇಲೆ ಯಾರು ರಾಜಕಾರಣ ಮಾಡಬಾರದು, ನೇಹಾ ಹಂತಕನಿಗೆ ಗಲ್ಲು ಶಿಕ್ಷೆಯಾಗಲಿ : ಶಾಸಕ ಪ್ರಸಾದ್ ಅಬ್ಬಯ್ಯ

‘ನಕ್ಷತ್ರಗಳಿಗೆ ರಾಕೆಟ್ ಕಳುಹಿಸಿ’ : ಇರಾನ್ ಮೇಲೆ ಇಸ್ರೇಲ್ ಡ್ರೋನ್ ದಾಳಿ ನಂತ್ರ ‘ಎಲೋನ್ ಮಸ್ಕ್’ ರಹಸ್ಯ ಸಂದೇಶ

Share.
Exit mobile version